Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| 300 ಕೋಟಿ ರೂ. ಹೂಡಿಕೆಗೆ...

ಮಂಗಳೂರು| 300 ಕೋಟಿ ರೂ. ಹೂಡಿಕೆಗೆ ಜರ್ಮನಿಯ ಈಟ್ಯಾಗ್ ಕಂಪೆನಿ-ಎಸ್‌ಇಝೆಡ್ ‘ಇಒಐ’ಗೆ ಸಹಿ

ವಾರ್ತಾಭಾರತಿವಾರ್ತಾಭಾರತಿ27 Jan 2025 8:17 PM IST
share
ಮಂಗಳೂರು| 300 ಕೋಟಿ ರೂ. ಹೂಡಿಕೆಗೆ ಜರ್ಮನಿಯ ಈಟ್ಯಾಗ್ ಕಂಪೆನಿ-ಎಸ್‌ಇಝೆಡ್ ‘ಇಒಐ’ಗೆ ಸಹಿ

ಮಂಗಳೂರು, ಜ.27: ಜರ್ಮನಿ ಮೂಲದ ಸಂಸ್ಥೆ ಯುರೋಪಿಯನ್ ಟೆಕ್ನಾಲಜಿ ಅಲೈಯನ್ಸ್ ಗ್ರೂಪ್( ಈಟ್ಯಾಗ್ ) ಮಂಗಳೂರಿಗೆ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಲು ಆಸಕ್ತಿ ವಹಿಸಿದ್ದು, ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ (ಎಂಎಸ್‌ಇಝೆಡ್ ) ಸುಮಾರು 300 ಕೋಟಿ ರೂ. ಹೂಡಿಕೆ ಮಾಡಲಿದೆ.

ನಗರದ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಈಟ್ಯಾಗ್ ಸಂಸ್ಥೆಯ ಸೇಲ್ಸ್ ಆ್ಯಂಡ್ ಮಾರ್ಕೆಟಿಂಗ್ ವಿಭಾಗದ ನಿರ್ದೇಶಕ ಬಿ.ಎಂ.ಪ್ರಕಾಶ್ ಪಿರೇರಾ ಮತ್ತು ಮಂಗಳೂರು ವಿಶೇಷ ಆರ್ಥಿಕ ವಲಯ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂರ್ಯ ನಾರಾಯಣ್ ಬೃಹತ್ ಮೊತ್ತದ ಬಂಡವಾಳ ಹೂಡಿಕೆಗೆ ಪೂರಕವಾದ ಒಡಂಬಡಿಕೆ(ಎಂಒಯು)ಗೆ ಪರಸ್ಪರ ಸಹಿ ಹಾಕಿದ್ದಾರೆ.

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಈಟ್ಯಾಗ್‌ನ ಸಿಇಒ ಜ್ಯೋತಿ ಪಿರೇರಾ, ಸಿಎ ನಿತಿನ್ ಜೆ ಶೆಟ್ಟಿ, ಮಂಗಳೂರು ವಿಶೇಷ ಆರ್ಥಿಕ ವಲಯ ಸಂಸ್ಥೆಯ ಕಂಪೆನಿ ಕಾರ್ಯದರ್ಶಿ ವಿ.ಫಣಿ ಭೂಷಣ್ ಎಸ್‌ಇಝೆಡ್ ಸಿಎಫ್‌ಒ ರಮೇಶ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈಟ್ಯಾಗ್ ಮಂಗಳೂರು ವಿಶೇಷ ಆರ್ಥಿಕ ವಲಯಯಲ್ಲಿ ಭೂಮಿಯನ್ನು ಪಡೆದುಕೊಂಡು 2026ರ ಆರಂಭದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದ್ದು, ವಾರ್ಷಿಕ 110 ಮಿಲಿಯನ್ ಯುಎಸ್‌ಡಿ ಮೌಲ್ಯದ ಉತ್ಪನ್ನಗಳನ್ನು ಉತ್ಪಾದಿಸಿ ರಫ್ತು ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ದ.ಕ ಮೂಲದ ಬಿ.ಎಂ.ಪ್ರಕಾಶ್ ಪಿರೇರಾ ಮಾಹಿತಿ ನೀಡಿದರು.

ಈಟ್ಯಾಗ್ ಗ್ರೂಪ್ ತನ್ನ ಜಾಗತಿಕ ಪ್ರಧಾನ ಕಚೇರಿ ಮತ್ತು ಉತ್ಪಾದನಾ ಸೌಲಭ್ಯಗಳನ್ನು ಮಧ್ಯಪ್ರಾಚ್ಯ ಮತ್ತು ಜರ್ಮನಿಯಿಂದ ಭಾರತದ ಮಂಗಳೂರಿಗೆ ಸ್ಥಳಾಂತರಿಸುವುದಾಗಿ ಘೋಷಿಸಲು ಹೆಮ್ಮೆಯಾಗುತ್ತದೆ ಎಂದು ಹೇಳಿದ ಅವರು ಇದರಿಂದಾಗಿ ನಾವು ಏಶ್ಯದಲ್ಲಿ ಬೆಳೆಯುತ್ತಿರುವ ಗ್ರಾಹಕರಿಗೆ ಹತ್ತಿರವಾಗಿ ಮತ್ತು ನೂತನ ಆವಿಷ್ಕಾರ ಮತ್ತು ವಿಸ್ತರಣಾ ಪ್ರಯತ್ನಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅನುವು ಮಾಡಿಕೊಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜರ್ಮನಿಯ ಈಗಲ್ಸ್ ಬಬಾಚ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಟ್ಯಾಗ್ ಜಿಎಂಬಿಎಚ್‌ನ ಭಾರತೀಯ ಅಂಗಸಂಸ್ಥೆಯಾಗಿದೆ. ಇಂಧನ ಪರಿಹಾರ ವಲಯದಲ್ಲಿ ಪ್ರಾಮುಖ್ಯತೆ ಪಡೆದುಕೊಂಡಿದೆ

ಮುಂದಿನ ಪೀಳಿಗೆಯ ವಿದ್ಯುತ್ ತಂತ್ರಜ್ಞಾನಗಳು ಮತ್ತು ಹೈಬ್ರಿಡ್ ಸೂಪರ್-ಫಾಸ್ಟ್ ಇಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್‌ನಂತಹ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಬದ್ಧವಾಗಿದೆ. ಕಂಪೆನಿಯು ಭವಿಷ್ಯದ ತಂತ್ರಜ್ಞಾನಗಳ ಬದಲಾವಣೆಗಳ ಮೇಲೆ ತನ್ನ ಸಂಶೋಧನೆಯನ್ನು ಕೇಂದ್ರೀಕರಿಸಿ, ನಿರ್ಣಾಯಕ ವಿದ್ಯುತ್ ಪರಿಹಾರಗಳು ಮತ್ತು ಸುಸ್ಥಿರ ಶಕ್ತಿಯಲ್ಲಿ ನಾವೀನ್ಯತೆಯನ್ನು ನಡೆದು ಮುನ್ನಡೆಯಲಿದೆ.

ದುಬೈನಲ್ಲಿ ತನ್ನ ಪ್ರಾದೇಶಿಕ ಕಚೇರಿಯನ್ನು ಹೊಂದಿರುವ ಈಟ್ಯಾಗ್ ಮಧ್ಯಪ್ರಾಚ್ಯ ಮತ್ತು ಯುರೋಪಿನಾದ್ಯಂತ ಬೃಹತ್ ಯೋಜನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಈಟ್ಯಾಗ್ ಸಂಸ್ಥೆ ಮೆಟ್ರೋ ಸಿಸ್ಟಮ್ಸ್ ವಿಮಾನ ನಿಲ್ದಾಣಗಳು, ಕ್ರೀಡಾಂಗಣ ಮತ್ತು ವಿಶ್ವ ದರ್ಜೆಯ ಫುಟ್ಬಾಲ್ ಕ್ರೀಡಾಂಗಣಗಳಂತಹ ದೊಡ್ಡ-ಪ್ರಮಾಣದ ಯೋಜನೆಗಳಲ್ಲಿ ತನ್ನ ಬಂಡವಾಳವನ್ನು ಹೂಡಿಕೆ ಮಾಡಿದೆ. ಇತ್ತೀಚೆಗೆ, ಕಂಪೆನಿಯು ದೋಹಾ, ಕತಾರ್‌ನಲ್ಲಿ 90 ಕೋಟಿ ರೂ . ವೆಚ್ಚದಲ್ಲಿ 257 ಹೈಬ್ರಿಡ್ ಸ್ಟೇಷನ್ ಸೂಪರ್ ಚಾರ್ಜರ್ ನೆಟ್‌ವರ್ಕ್‌ನ್ನು ನಿರ್ವಹಿಸುವ ಜವಾಬ್ದಾರಿಯನ್ನು ಪಡೆದಿದೆ ಎಂದು ಈಟ್ಯಾಗ್ ಸಂಸ್ಥೆಯ ಸೇಲ್ಸ್ ಆ್ಯಂಡ್ ಮಾರ್ಕೆಟಿಂಗ್ ವಿಭಾಗದ ನಿರ್ದೇಶಕ ಬಿ.ಎಂ.ಪ್ರಕಾಶ್ ಪಿರೇರಾ ಮಾಹಿತಿ ನೀಡಿದರು.

ಸಂಸದ ಬ್ರಿಜೇಶ್ ಚೌಟ ಮಾತನಾಡಿ ದೇಶ-ವಿದೇಶದಲ್ಲಿರುವ ಮಂಗಳೂರು ಮೂಲದ ಉದ್ಯಮಿಗಳನ್ನು ನಮ್ಮೂರಿಗೆ ಕರೆತರುವ ಭಾಗವಾಗಿ ಬ್ಯಾಕ್ ಟು ಊರು ಪರಿಕಲ್ಪನೆ ಆರಂಭಿಸಲಾಗಿತ್ತು. ಇದಕ್ಕೆ ಇಷ್ಟು ಬೇಗ ದೊಡ್ಡ ಮಟ್ಟದ ಯಶಸ್ವಿ ಸಿಗುತ್ತದೆಂದು ಭಾವಿಸಿರಲಿಲ್ಲ. ‘ಬ್ಯಾಕ್ ಟು ಊರು’ ಕಲ್ಪನೆಯಡಿ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಬಂಡವಾಳ ಹೂಡಿಕೆ ಮುಂದಾಗಿರುವ ಎರಡನೇ ಕಂಪನಿ ಇದಾಗಿದೆ. ಈಟ್ಯಾಗ್ ಕಂಪೆನಿಯು ಸುಸ್ಥಿರ ಇಂಧನ ಹಾಗೂ ಇವಿ ತಂತ್ರ ಜ್ಞಾನ ಅಭಿವೃದ್ಧಿಗೆ ಮಂಗಳೂರಿನಲ್ಲಿ 300 ಕೋಟಿ ಬಂಡವಾಳ ಹೂಡಿಕೆ ಮಾಡುವ ಜತೆಗೆ ಜಾಗತಿಕ ಕಚೇರಿಯನ್ನೂ ನಮ್ಮೂರಿಗೆ ಶಿಫ್ಟ್ ಮಾಡಲು ಆಸಕ್ತಿ ತೋರಿಸಿರುವುದು ಬಹಳ ಸಂತಸ ತಂದಿದೆ. ಅಲ್ಲದೆ, ಭಾರತವನ್ನು ಸುಸ್ಥಿರ ಇಂಧನ ಉತ್ಪಾದನೆ ಹಾಗೂ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ವಿಶ್ವಕ್ಕೆ ನಾಯಕನ್ನಾಗಿ ಪರಿವರ್ತಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಪ್ರಯತ್ನಕ್ಕೆ ಇದು ಇನ್ನಷ್ಟು ಉತ್ತೇಜನ ನೀಡಲಿದೆ ಎಂದು ಅವರು ಹೇಳಿದರು.

ಎಸ್‌ಇಝೆಡ್ ಸಿಇಒ ಸೂರ್ಯನಾರಾಯಣ, ಮಾತನಾಡಿ ಮೊದಲನೆಯ ಇಒಐ ಸಹಿ ಮಾಡಿದ ಕೆಲವೇ ವಾರಗಳಲ್ಲಿ ಇದೀಗ ಮತ್ತೊಂದು ದೊಡ್ಡ ಮಟ್ಟದ ಹೂಡಿಕೆಗೆ ಸಂಬಂಧಿಸಿದಂತೆ ಎರಡನೇ ಇಒಐಗೆ ಸಹಿ ಹಾಕಲಾಗಿದೆ ಮಂಗಳೂರಿನಲ್ಲಿಎಸ್‌ಇಝೆಡ್ ನಲ್ಲಿ ಮತ್ತಷ್ಟು ಕಂಪನಿಗಳ ಹೂಡಿಕೆ ಆಕರ್ಷಿಸಲು ಇದು ಪ್ರೇರಣೆಯಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X