Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ. 31: ಬ್ರಹ್ಮರಕೊಟ್ಲು ಟೋಲ್ ಗೇಟ್...

ಜ. 31: ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Jan 2025 10:45 PM IST
share
ಜ. 31: ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬಂಟ್ವಾಳ : ಬ್ರಹ್ಮರಕೊಟ್ಲುವಿನ ಟೋಲ್ ಗೇಟ್ ತೆರವು ಗೊಳಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಜ. 31ರಂದು ಸಂಜೆ 3 ಗಂಟೆಗೆ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಎಸ್ ತಿಳಿಸಿದ್ದಾರೆ.

ಗುರುವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೂಲಭೂತ ಸೌಕರ್ಯಗಳನ್ನು ಹೊಂದದ ಅವೈಜ್ಞಾನಿಕ ಮತ್ತು ಅಸಮರ್ಪಕವಾದ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸರಕಾರದ ನಿಯಮ, ಮಾನದಂಡವನ್ನು ಉಲ್ಲಂಘಿಸಿ ಕಳೆದ 12 ವರ್ಷಗಳಿಂದ ಬ್ರಹ್ಮರಕೋಟ್ಲುವಿನಲ್ಲಿ ಟೋಲ್ ಗೇಟ್ ಕಾರ್ಯಾಚರಿಸುತ್ತಿದೆ. ಇಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲ, ಹೆದ್ದಾರಿಯಲ್ಲಿ ದಾರಿದೀಪವಿಲ್ಲ, ಪ್ರತೀ ವರ್ಷ ರಸ್ತೆಯನ್ನು ನಿರ್ವಹಣೆ ಮಾಡಬೇಕಾದ ಇದರ ಬಗ್ಗೆ ಗಮನಹರಿಸದೆ ಕಾಟಾಚಾರಕ್ಕೆ ತೇಪೆ ಹಾಕಲಾಗುತ್ತಿದೆ. ಟೋಲ್ ನ ಸಿಬ್ಬಂದಿಗಳು ವಾಹನ ಚಾಲಕರು ಹಾಗೂ ಪ್ರಯಾಣಿಕರೊಂದಿಗೆ ಗೂಂಡಾ ವರ್ತನೆ ತೋರುತ್ತಿದ್ದು ಪೊಲೀಸರು ಕೂಡ ಇವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಈ ಎಲ್ಲಾ ಅಂಶಗಳನ್ನು ಖಂಡಿಸಿ ಬಿ.ಸಿ.ರೋಡಿನ ಕೈಕಂಬ ಜಂಕ್ಷನ್ ನಿಂದ ಪಾದಯಾತ್ರೆಯ ಮೂಲಕ ಹೊರಟು ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಗೆ ವಿವಿಧ ವಾಹನ ಚಾಲಕ, ಮಾಲಕರು, ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿದ್ದು ಅವರು ಕೂಡಾ ಭಾಗವಹಿಸಲಿದ್ದಾರೆ ಎಂದರು.

ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ⁠ಮೂನಿಶ್ ಅಲಿ ಮಾತನಾಡಿ, ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮಾಡುವುದು ರಸ್ತೆ ನಿರ್ವಹಣೆಯ ಉದ್ದೇಶಕ್ಕಾಗಿ ಹೊರತು ರಸ್ತೆ ನಿರ್ಮಿಸಿದ್ದಕ್ಕಾಗಿ ಅಲ್ಲ ಎಂಬುದನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಅಕ್ಬರ್ ಪೊನ್ನೋಡಿ, ಶಾಕಿರ್ ಅಳಕೆಮಜಲು, ಅಶ್ರಫ್ ತಲಪಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X