Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಾವಂಜೆ ನಂದಿನಿ ನದಿ ಕಲುಷಿತ:...

ಪಾವಂಜೆ ನಂದಿನಿ ನದಿ ಕಲುಷಿತ: ಸ್ವಚ್ಛಗೊಳಿಸಲು ಒತ್ತಾಯಿಸಿ ಮಾರ್ಚ್ 4ರಂದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Feb 2025 8:03 PM IST
share
ಪಾವಂಜೆ ನಂದಿನಿ ನದಿ ಕಲುಷಿತ: ಸ್ವಚ್ಛಗೊಳಿಸಲು ಒತ್ತಾಯಿಸಿ ಮಾರ್ಚ್ 4ರಂದು ಪ್ರತಿಭಟನೆ

ಸುರತ್ಕಲ್:‌ ಇಲ್ಲಿನ ಪಾವಂಜೆ ನಂದಿನಿ ನದಿ ಕಲುಷಿತಗೊಂಡಿದ್ದು, ನದಿಯನ್ನು ಕಲುಶಿತಗೊಳಿಸಿರುವವರ ವಿರುದ್ಧ ಸೂಕ್ತ ಕ್ರಮ ವಹಿಸಿ ನಂದಿನಿ ನದಿಯನ್ನು ಸ್ವಚ್ಛಗೊಳಿಸಿ ರಕ್ಷಿಸಬೇಕೆಂದು ಆಗ್ರಹಿಸಿ ಚೇಳಾಯರು ಖಂಡಿಗೆ ನಂದಿನಿ ನದಿ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮಾರ್ಚ್ 4ರಂದು ಚೇಳಾಯರು ನಂದಿನ ಮಿತ್ರ ಮಂಡಳಿ ಬಳಿ ಬೃಹತ್‌ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಖಂಡಿಗೆ ದೈವಸ್ಥಾನದ ಸಭಾಭವನದಲ್ಲಿ ರವಿವಾರ ನಡೆದ ಸಭೆಯಲ್ಲಿ ಗ್ರಾಮಸ್ಥರು ಈ ಕುರಿತು ಒಕ್ಕೊರಳ ನಿರ್ಧಾರ ಪ್ರಕಟಿಸಿದರು. ಇತಿಹಾಸ ಪ್ರಸಿದ್ದ ಚೇಳಾಯರು ಖಂಡಿಗೆ ನಂದಿನಿ ನದಿಗೆ ಕೊಡಿಪಾಡಿಯಲ್ಲಿ ನಿರ್ಮಾಣವಾಗಿರುವ ತ್ಯಾಜ್ಯ ಸಂಸ್ಕರಣಾ ಘಟಕದ ನೀರು, ಚೊಕ್ಕಬೆಟ್ಟು ಪರಿಸರದ ಮನೆಯ ತ್ಯಾಜ್ಯ ನೀರು, ಮುಕ್ಕದ ಖಾಸಗಿ ಆಸ್ಪತ್ರೆ, ಕಾಲೇಜು, ವಸತಿ ಗೃಹ ಮತ್ತು ಹೋಟೇಲ್ ಗಳ ತ್ಯಾಜ್ಯ ನೀರನ್ನು ನಂದಿನಿ ನದಿಗೆ ಬೀಡುತ್ತಿದ್ದು, ನದಿ ಸಂಪೂರ್ಣ ಕಲುಷಿತಗೊಂಡಿದೆ. ಇದರಿಂದಾಗಿ ಚೇಳಾಯರು ಖಂಡಿಗೆ ಭಾಗದ ಕೃಷಿಯ ಅವಲಂಬಿತ ಕುಟುಂಬಗಳು ಕೃಷಿ ಮಾಡದ ಪರಿಸ್ಥಿತಿ ಎದುರಾಗಿದೆ. ಕುಡಿಯುವ ನೀರಿಗೂ ಸಮಸ್ಯೆಯಾಗಿದ್ದು ಬಾವಿಗಳು ಮಲಿನಗೊಂಡಿವೆ. ಇತಿಹಾಸ ಪ್ರಸಿದ್ದ ಖಂಡಿಗೆ ದೈವಸ್ಥಾನದ ಮೀನು ಹಿಡಿಯುವ ವಿಶೇಷ ಜಾತ್ರೆ ನಿಲ್ಲುವ ಹಂತಕ್ಕೆ ತಲುಪಿದೆ ಎಂದು ಗ್ರಾಮಸ್ಥರು ಸಭೆಯಲ್ಲಿ ಆಕ್ರೋಶ ಹೊರಹಾಕಿದರು.

ಜನರು ಹಾಗೂ ಜಾನುವಾರುಗಳು ಬಾವಿಯ ನೀರು ಕುಡಿದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಹುರಿಯಾಗಿ ಆಸ್ಪತ್ರೆಗೆಗಳಿಗೆ ಸೇರುವಂತಾಗಿದೆ. ನಂದಿನಿ ನದಿ ಸಂರಕ್ಷಣಾ ಸಮಿತಿ ಖಂಡಿಗೆ ಚೇಳಾಯರು ಮೂಲಕ ಜಿಲ್ಲೆಯ ಸಂಸದರು, ಶಾಸಕರಿಗೆ, ಮಂಗಳೂರು ಮಹಾನಗರ ಪಾಲಿಕೆ ಮೇಯರ್, ಜಿಲ್ಲಾಧಿಕಾರಿಗೆ, ನಗರ ಪಾಲಿಕೆ, ಗ್ರಾಮ ಪಂಚಾಯತ್ ಹಾಗೂ ಸಂಬಂಧಿತ ಇಲಾಖೆಗಳಿಗೆ ನೂರಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ಸಭೆಯಲ್ಲಿ ಮಾತನಾಡಿದ ಚೇಳಾಯರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ ಮಾತನಾಡಿ, ನಂದಿನಿ ನದಿ ಕಲುಷಿತ ಗೊಂಡ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತ್ ಮತ್ತು ಸಂರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ,ನಗರ ಪಾಲಿಕೆ, ಪರಿಸರ ಇಲಾಖೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ನೀಡಿದ್ದೇವೆ. ಸರಿಪಡಿಸುವ ಭರವಸೆ ನೀಡಿದ್ದಾರೆ ಹೊರತು ಈವರೆಗೂ ಯಾವುದೇ ಕ್ರಮವಾಗಿಲ್ಲ. ಅದ್ದರಿಂದ ಈ ಸಮಸ್ಯಗೆ ಜಿಲ್ಲಾಡಳಿತ ಮತ್ತು ಪರಿಸರ ಇಲಾಖೆಯ ವೈಫಲ್ಯ ನೇರ ಕಾರಣವೆಂದು ದೂರಿದರು.

ವೇದಿಕೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ದಿವಾಕರ ಸಾಮಾನಿ ಚೇಳಾಯರು ಗುತ್ತು, ಸತೀಶ್ ಮುಂಚೂರು, ಚಿತ್ತರಂಜನ್ ಭಂಡಾರಿ, ಉದಯಕುಮಾರ್ ಶೆಟ್ಟಿ ತೋಕೂರುಗುತ್ತು, ವಕೀಲರಾದ ರವೀಂದ್ರನಾಥ್ ಶೆಟ್ಟಿ, ದಯಾನಂದ ಶೆಟ್ಟಿ ಖಂಡಿಗೆ, ಸುಧಾಕರ ಶೆಟ್ಟಿ ಖಂಡಿಗೆ, ವೀಣಾ ಟಿ. ಶೆಟ್ಟಿ ಚೇಳಾಯರು ರುಗುತ್ತು, ಪುಷ್ಪರಾಜ್ ಶೆಟ್ಟಿ ಮಧ್ಯ, ಪ್ರತಿಮಾ ಶೆಟ್ಟಿ ಮಧ್ಯ, ರಮೇಶ್ ಪೂಜಾರಿ ಚೇಳಾಯರು, ಬಾಲಕೃಷ್ಣ ಶೆಟ್ಟಿ ಚೇಳಾಯರು, ಸುರೇಶ್ ಶೆಟ್ಟಿ ಕಾಲನಿ, ಪ್ರಮೋದ್ ಶೆಟ್ಟಿ ಸುರತ್ಕಲ್, ಕಿರಣ್ ಶೆಟ್ಟಿ ಕೆರೆಮನೆ, ಲಕ್ಷ್ಮಣ ಪೂಜಾರಿ, ಮೋಹನ್ ಚೇಳಾಯರು, ಮುದ್ದು ಸುವರ್ಣ, ಚರಣ್ ಕುಮಾರ್, ನಾಗೇಶ್ ಖಂಡಿಗೆ ಮುಂತಾದವರು ಉಪಸ್ಥಿತರಿದ್ದರು

ಕೊಡಿಪಾಡಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕವು ಕಾನೂನು ಬಾಹಿರವಾಗಿ ಕಾರ್ಯಾಚರಿಸುತ್ತಿದ್ದು, ಅದರ ಸಂಸ್ಕರಿಸಲಾದ ನೀರಿನ ಅವಶೇಷಗಳನ್ನು ಕಾನೂನು ಬಾಹಿರವಾಗಿ ನಂದಿನಿ ನದಿಗೆ ಬಿಡಲಾಗುತ್ತಿದೆ. ಇದಕ್ಕೆ ಜಿಲ್ಲಾಡಳಿತ ತಕ್ಷಣ ತಡೆ ಹೇರಬೇಕು. ಯಾವುದೇ ಕಾರಣಕ್ಕೂ ಮುಕ್ಕದ ಖಾಸಗಿ ಆಸ್ಪತ್ರೆ, ಹೋಟೆಲ್, ಒಳಚರಂಡಿಯ ಕೊಳಚೆ ನೀರು, ವೆಟ್ ವೆಲ್ ನ ನೀರು ಮತ್ತು ಮನೆಯ ತ್ಯಾಜ್ಯ ನೀರು ನಂದಿನಿ ನದಿಗೆ ಬಿಡಬಾರು. ಹೋರಾಟವನ್ನು ರಾಜಕೀಯರಹಿತವಾಗಿ ನಡೆಸುವುದಾಗಿ ಸಭೆಯು ತೀರ್ಮಾನಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X