ಉಳ್ಳಾಲ ಉರೂಸ್: ಇಂದು(ಮೇ 4) ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ಉಳ್ಳಾಲ: ಅಸ್ಸೈಯದ್ ಮುಹಮ್ಮದ್ ಶರೀಫುಲ್ ಮದನಿ ತಂಙಳ್ ಅವರ ಹೆಸರಿನಲ್ಲಿ ನಡೆಯುತ್ತಿರುವ 'ಉಳ್ಳಾಲ ಉರೂಸ್' ನಲ್ಲಿ ಇಂದು ( ಮೇ 4 ರವಿವಾರ) ಸಂಜೆ 7:30ಕ್ಕೆ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ.
ಅಬ್ದುಲ್ ರಶೀದ್ ಮದನಿ ಆಲಪ್ಪುಝ ಮತ್ತು ಫಾರೂಕ್ ನಈಮಿ ಕೊಲ್ಲಂ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸೈಯದ್ ಮುನೀರ್ ಅಹ್ದಲ್ ತಂಙಳ್ ದುಆ ನೆರವೇರಿಸಲಿದ್ದಾರೆ ಎಂದು ದರ್ಗಾ ಸಮಿತಿಯ ಅಧ್ಯಕ್ಷ ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story