ದ್ವಿತೀಯ ಪಿಯುಸಿ ಪರೀಕ್ಷೆ: 46 ವಿದ್ಯಾರ್ಥಿಗಳು ಗೈರು

ಮಂಗಳೂರು, ಮಾ.12: ದ.ಕ.ಜಿಲ್ಲೆಯಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 46 ಮಂದಿ ಗೈರಾಗಿದ್ದಾರೆ.
ಮನಃಶಾಸ್ತ್ರ ಪರೀಕ್ಷೆಗೆ 252 ವಿದ್ಯಾರ್ಥಿಗಳು ಹಾಜರಾಗಿದ್ದು, 3 ವಿದ್ಯಾರ್ಥಿಗಳು ಗೈರಾಗಿದ್ದರು. ರಸಾಯನ ಶಾಸ್ತ್ರ ಪರೀಕ್ಷೆಗೆ 17,577 ವಿದ್ಯಾರ್ಥಿಗಳು ಹಾಜರಾಗಿದ್ದು, 43 ವಿದ್ಯಾರ್ಥಿಗಳು ಗೈರಾಗಿದ್ದರು.
ಮೂಲ ಗಣಿತ ವಿಷಯದಲ್ಲಿ ಎಲ್ಲಾ 551 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಪದಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story