Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ನಗರದಲ್ಲಿ ಮೂರು ವರ್ಷಗಳಲ್ಲಿ...

ಮಂಗಳೂರು ನಗರದಲ್ಲಿ ಮೂರು ವರ್ಷಗಳಲ್ಲಿ ರಸ್ತೆ ಅಪಘಾತಕ್ಕೆ 490 ಮಂದಿ ಬಲಿ: ವರದಿ

ವಾರ್ತಾಭಾರತಿವಾರ್ತಾಭಾರತಿ13 Feb 2025 7:16 PM IST
share
ಮಂಗಳೂರು ನಗರದಲ್ಲಿ ಮೂರು ವರ್ಷಗಳಲ್ಲಿ ರಸ್ತೆ ಅಪಘಾತಕ್ಕೆ 490 ಮಂದಿ ಬಲಿ: ವರದಿ

ಮಂಗಳೂರು, ಫೆ.13: ಮಂಗಳೂರು ನಗರದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 490 ಮಂದಿ ಮೃತಪಟ್ಟಿದ್ದಾರೆ.

2022ರಲ್ಲಿ 160, 2023ರಲ್ಲಿ 165 ಮತ್ತು 2024ರಲ್ಲಿ 165 ಮಂದಿ ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ.

ರಾಜ್ಯದಲ್ಲಿ 2024ನೇ ಸಾಲಿನಲ್ಲಿ 42,000 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು, 11,300 ಮಂದಿ ಮೃತಪಟ್ಟಿದ್ದಾರೆ ಮತ್ತು 54,400 ಮಂದಿ ಗಾಯಗೊಂಡಿದ್ದಾರೆ.

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದಿರುವ ಒಟ್ಟು ಅಪಘಾತಗಳ ಸಂಖ್ಯೆ 1,209 ಇದು ಬಳಿಕದ ಎರಡು ವರ್ಷಗಳಲ್ಲಿ ಜಾಸ್ತಿಯಾಗಿದೆ. 2023ರಲ್ಲಿ 1,321 ಮತ್ತು 2024ರಲ್ಲಿ ಅಪಘಾತಗಳ ಸಂಖ್ಯೆ 1,351ಕ್ಕೆ ಏರಿದೆ.

ಮಾರಣಾಂತಿಕ ಅಪಘಾತಗಳು 2022ರಲ್ಲಿ 153, 2023ರಲ್ಲಿ 159 ಮತ್ತು 2024ರಲ್ಲಿ 160 ಸಂಭವಿಸಿದೆ.

ಮಾರಣಾಂತಿಕವಲ್ಲದ ಅಪಘಾತಗಳು ಕೂಡಾ ಜಾಸ್ತಿಯಾಗಿದೆ. 2022 ರಲ್ಲಿ 775, 2023ರಲ್ಲಿ 848 ಮತ್ತು 2024ರಲ್ಲಿ 863 ಮಾರಣಾಂತಿಕವಲ್ಲದ ಅಪಘಾತಗಳು ನಡೆದಿರುವುದು ವರದಿಯಾಗಿದೆ.

2022ರಲ್ಲಿ ದಾಖಲಾಗಿರುವ ಒಟ್ಟು ಪ್ರಕರಣಗಳು 928, 2023ರಲ್ಲಿ 1,007 ಹಾಗೂ 2024ರಲ್ಲಿ 1,023 ಪ್ರಕರಣಗಳು ದಾಖಲಾಗಿವೆ.

2022ರಲ್ಲಿ 1,049 ಮಂದಿ ಅಪಘಾತದಿಂದಾಗಿ ಗಾಯಗೊಂಡಿದ್ದರು. 2023ರಲ್ಲಿ 1, 156 ಮತ್ತು 2024ರಲ್ಲಿ 1,186 ಮಂದಿ ಅಪಘಾತದಿಂದಾಗಿ ಗಾಯಗೊಂಡಿದ್ದಾರೆ.

*18.50 ಕೋಟಿ ರೂ. ದಂಡ: ಕಳೆದ ಮೂರು ವರ್ಷಗಳಲ್ಲಿ ಮೋಟಾರು ವಾಹನ ಕಾಯ್ದೆ ಪ್ರಕಾರ 4,44,706 ಪ್ರಕರಣಗಳು ದಾಖಲಾಗಿವೆ. 18,50,96,200 ದಂಡ ವಿಧಿಸಲಾಗಿದೆ. 2024ರಲ್ಲಿ 1,63,454 ಪ್ರಕರಣ ದಾಖಲಿಸಲಾಗಿದ್ದು, 6,43,31,100 ರೂ ದಂಡ ವಿಧಿಸಲಾಗಿತ್ತು.

2023ರಲ್ಲಿ ಪ್ರಕರಣಗಳು 1,36,493 , ದಂಡ 5,41,88,300 ಮತ್ತು 2024ರಲ್ಲಿ ಪ್ರಕರಣಗಳು 1,44,859 ಮತ್ತು ವಿಧಿಸಲಾದ ದಂಡ 6,65,76,800 ರೂ.

*288 ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ: ಕಳೆದ ಮೂರು ವರ್ಷಗಳಲ್ಲಿ ಸುಮಾರು 288 ಶಾಲೆಗಳಲ್ಲಿ ಹಾಗೂ 176 ಕಾಲೇಜುಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ. 883 ಮುಖ್ಯ ರಸ್ತೆ ಹಾಗೂ ಪ್ರಮುಖ ಸ್ಥಳಗಳಲ್ಲಿ ಬೀದಿ ನಾಟಕ ಮತ್ತು ಭಿತ್ತಿಪತ್ರ ಪ್ರದರ್ಶನದ ಮೂಲಕ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶ್ರಮಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ ಅಗ್ರವಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X