Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 5ರಿಂದ ಪರಿಶಿಷ್ಟ ಜಾತಿಗಳ ದತ್ತಾಂಶ...

ಮೇ 5ರಿಂದ ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ವಾರ್ತಾಭಾರತಿವಾರ್ತಾಭಾರತಿ29 April 2025 8:42 PM IST
share
ಮೇ 5ರಿಂದ ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು, ಎ. 29: ರಾಜ್ಯ ಸರಕಾರ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ನ್ಯಾ. ಡಾ. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ನೇಮಕ ಮಾಡಿ, ಪರಿಶಿಷ್ಟ ಜಾತಿಗಳ ದತ್ತಾಂಶಗಳನ್ನು ಸಂಗ್ರಹಿಸಲು ಸಮೀಕ್ಷೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ದ.ಕ. ಜಿಲ್ಲೆಯಲ್ಲಿ ಮೇ 5ರಿಂದ 17ರವರೆಗೆ ಪ್ರಥಮ ಹಂತದಲ್ಲಿ ಈ ಕಾರ್ಯಕ್ಕಾಗಿ ನಿಯೋಜಿತ ಶಿಕ್ಷಕರಿಂದ ದತ್ತಾಂಶ ಸಂಗ್ರಹ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ಸಂವಿಧಾನದ 341ನೆ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಸಮೀಕ್ಷೆಯ ವೇಳೆ ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಕುರಿತು ಅಂಕಿ ಅಂಶ ಸಂಗ್ರಹಿಸಲಾಗುತ್ತದೆ ಎಂದು ಅವರು ಹೇಳಿದರು.

ತಾಲೂಕು ಮಟ್ಟದಲ್ಲಿ ಮಾಸ್ಟರ್ ತರಬೇತುದಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ನೀಡಲಾಗಿದ್ದು, ಇವರು ನಿಗದಿತ ಅವಧಿಯಲ್ಲಿ ನಿಖರ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ.

ಮತದಾರರ ಪಟ್ಟಿಯಲ್ಲಿರುವ ಮನೆಗಳ ಆಧಾರದ ಮೇಲೆ ಸಮೀಕ್ಷಾ ಕಾರ್ಯ ನಡೆಸಬೇಕಿದೆ. ಸಮೀಕ್ಷೆ ದಾರರು ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆಯ ಅಪ್ಲಿಕೇಶನ್‌ಗೆ ಲಾಗಿನ್ ಆಗಿ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಒಟಿಪಿ ನಮೂದಿಸಿ 42 ವಿವಿಧ ಮಾಹಿತಿಗಳನ್ನು, ಕುಟುಂಬ ಸದಸ್ಯರ ಸ್ವಯಂ ಘೋಷಿತ ವಿವರಗಳನ್ನು ದಾಖಲಿಸಿಕೊಳ್ಳಲಿದ್ದಾರೆ.

ದ್ವಿತೀಯ ಹಂತದಲ್ಲಿ ಮೇ 19ರಿಂದ 21ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳನ್ನು ಏರ್ಪಡಿಸಿ ಮಾಹಿತಿ ನೀಡಲು ಅವಕಾಶ ನೀಡಲಾಗುತ್ತದೆ. ಮೊದಲ ಎರಡೂ ಹಂತಗಳಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಬಾಕಿಯಾದವರು ಮೂರನೆ ಹಂತದಲ್ಲಿ ಮೇ 19ರಿದಂ 21ರವರೆಗೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಂಡು ಸಮೀಕ್ಷೆಗೆ ಮಾಹಿತಿ ಒದಗಿಸಬಹುದು. ಇದಕ್ಕಾಗಿ ಅವರು ಆಧಾರ್ ಸಂಖ್ಯೆ ಮತ್ತು ಜಾತಿ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ ನೀಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ದ.ಕ. ಜಿಲ್ಲಾ ಉಪ ನಿರ್ದೇಶಕಿ ಡಾ. ಹೇಮಲತಾ ಉಪಸ್ಥಿತರಿದ್ದರು.

ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆಗಾಗಿ ಒಟ್ಟು 2046 ಶಿಕ್ಷಕರಿಗೆ ತರಬೇತಿ ನೀಡಿ ದತ್ತಾಂಶ ಸಂಗ್ರಹ ಕಾರ್ಯಕ್ಕೆ ನೇಮಕ ಮಾಡಲಾಗಿದೆ. ಸಮೀಕ್ಷೆಗಾಗಿ ಪ್ರತಿ 10ರಿಂದ 12 ಸಮೀಕ್ಷೆ ಬ್ಲಾಕಂಗಳಿಗೆ ಓರ್ವ ಮೇಲ್ವಿಚಾರಕರಂತೆ ಒಟ್ಟು 170 ಸಮೀಕ್ಷೆ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.

ಸಾರ್ವಜನಿಕರು ಈ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X