ಮಂಗಳೂರು ಮಹಾನಗರಪಾಲಿಕೆ ಆಸ್ತಿ ತೆರಿಗೆ: ಶೇ.5 ರಿಯಾಯಿತಿ ವಿಸ್ತರಣೆ

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ವಸೂಲಾತಿ ಯನ್ನು ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂ ಘೋಷಿತ ಆಸ್ತಿತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿನ 2025-26ನೇ ಸಾಲಿನ ಆಸ್ತಿತೆರಿಗೆಯನ್ನು ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ (ಎಪ್ರಿಲ್) ಪಾವತಿ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದು ಆಸ್ತಿ ತೆರಿಗೆ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸ ಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





