ರಾಜ್ಯದ 6 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ವಿಕಸಿತ ಭಾರತ ಕಾರ್ಯಕ್ರಮ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ರಾಜ್ಯದ 6 ಸಾವಿರ ಗ್ರಾಮ ಪಂಚಾಯತ್ ಗಳಲ್ಲಿ ವಿಕಸಿತ ಭಾರತದ ಪ್ರಚಾರ ಕಾರ್ಯಕ್ರಮ ಆರಂಭ ಗೊಂಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ದಕ್ಷಿಣ ಕನ್ನಡ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿ ಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು.
ದೇಶದ ಆರೂವರೆ ಲಕ್ಷ ಗ್ರಾಮ ಪಂಚಾಯತ್ ಗಳಲ್ಲಿ ಕೇಂದ್ರ ಸರಕಾರದ ನರೇಂದ್ರ ಮೋದಿ ನೇತೃತ್ವದ ಅಭಿವೃದ್ಧಿ ಯೋಜನೆಗಳ ಬಗ್ಗೆ ವಿಕಸಿತ ಭಾರತ ಹೆಸರಿನಲ್ಲಿ ಪ್ರಚಾರ ಕಾರ್ಯಕ್ರಮ ನಡೆಯುತ್ತಿದೆ ಎಂದು ಕೋಟ ಶ್ರೀನಿವಾಸ ಪುಜಾರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಬರ ಪರಿಹಾರದ ಬಗ್ಗೆ ಕೇಂದ್ರ ಸರಕಾರವನ್ನು ಟೀಕಿಸುವ ಬದಲು ರಾಜ್ಯ ಸರಕಾರ ಮುಂಚೂಣಿ ಯಲ್ಲಿ ನಿಂತು ಮೊದಲು ಪರಿಹಾರ ಕಾರ್ಯ ಆರಂಭಿಸಬೇಕಾಗಿದೆ ಬಳಿಕ ಕೇಂದ್ರದ ನೆರವನ್ನು ಯಾಚಿಸೋಣ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.
ಯತ್ನಾಳ್ ಅತೃಪ್ತಿಯ ಬಗ್ಗೆ ಪಕ್ಷದ ಗಮನಕ್ಕೆ ಬಂದಿದೆ ಅವರ ಹೆಳಿಕೆಗಳನ್ನು ಗಮನಿಸುತ್ತಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಬಸವನ ಗೌಡ ಪಾಟೀಲ್ ಯತ್ನಾಳ್ ರ ಹೇಳಿಕೆಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ತನ್ನನ್ನು ಆಯ್ಕೆ ಮಾಡಿದ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ಹಿರಿಯ ಮುಖಂಡ ರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಈ ಸಂದರ್ಭ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಬಿಜೆಪಿ ಮುಖಂಡರಾದ ಕಸ್ತೂರಿ ಪಂಜ, ಸತೀಶ್ ಕುಂಪಲ, ಆರ್.ಸಿ.ನಾರಾಯಣ, ನಿತಿನ್ ಕುಮಾರ್, ರಾಮ್ ದಾಸ್ ಬಂಟ್ವಾಳ, ರೂಪ ಡಿ ಬಂಗೇರ ಉಪಸ್ಥಿತರಿದ್ದರು.







