Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಂಚ ಗ್ಯಾರಂಟಿ ಯೋಜನೆ: ಫೆ.6ರಿಂದ...

ಪಂಚ ಗ್ಯಾರಂಟಿ ಯೋಜನೆ: ಫೆ.6ರಿಂದ ನೋಂದಾವಣೆ, ತಿರಸ್ಕೃತ ಅರ್ಜಿಗಳ ವಿಲೇವಾರಿಗೆ ಗ್ರಾಮ ಮಟ್ಟದಲ್ಲಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ5 Feb 2025 9:30 PM IST
share
ಪಂಚ ಗ್ಯಾರಂಟಿ ಯೋಜನೆ: ಫೆ.6ರಿಂದ ನೋಂದಾವಣೆ, ತಿರಸ್ಕೃತ ಅರ್ಜಿಗಳ ವಿಲೇವಾರಿಗೆ ಗ್ರಾಮ ಮಟ್ಟದಲ್ಲಿ ಶಿಬಿರ

ಮಂಗಳೂರು, ಫೆ. 5: ಮಂಗಳೂರು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ವತಿಯಿಂದ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ನೋಂದಾವಣೆಗೆ ಬಾಕಿ ಇರುವ ಹಾಗೂ ತಿರಸ್ಕೃತ ಅರ್ಜಿಗಳ ವಿಲೇವಾರಿಗೆ ಫೆ.6 ರಿಂದ 18ರ ವರೆಗೆ ಮಂಗಳೂರು ತಾಲೂಕಿನಲ್ಲಿ ಗ್ರಾಮ ಮಟ್ಟದಲ್ಲಿ ಶಿಬಿರ ನಡೆಯಲಿದೆ ಎಂದು ಮಂಗಳೂರು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ತಿಳಿಸಿದ್ದಾರೆ.

ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಫೆ. 6ರಂದು ನೀರುಮಾರ್ಗದ ಸೇವಾ ಸಹಕಾರಿ ಬ್ಯಾಂಕಿನ ಅಮೃತ ಸೌಧದಲ್ಲಿ ಬೆಳಗ್ಗೆ 10:30ಕ್ಕೆ ಉದ್ಘಾಟನೆ ನಡೆಯಲಿದೆ. ಬಳಿಕ ಅರ್ಜಿಗಳ ಕುಂದುಕೊರತೆ ಸ್ವೀಕರಿಸಲಾಗುವುದು. ಅಂದೇಉಳಾಯಿಬೆಟ್ಟು, ಮಲ್ಲೂರು ಗ್ರಾಮ ಪಂಚಾಯತ್‌ಗಳ ಶಿಬಿರವೂ ಅಲ್ಲೇ ನಡೆಯಲಿದೆ ಎಂದರು.

ಫೆ.10ರಂದು ಗಂಜಿಮಠ ಗ್ರಾ.ಪಂ ಸಭಾಭವನದಲ್ಲಿ ಗಂಜಿಮಠ, ಬಡಗ ಎಡಪದವು,ಮುಚ್ಚೂರು ಗ್ರಾ.ಪಂ. ವ್ಯಾಪ್ತಿಗೆ, ಫೆ.11ರಂದು ಅಡ್ಯಾರು ಗ್ರಾ.ಪಂ. ಸಭಾಭವನದಲ್ಲಿ ಅಡ್ಯಾರು ಗ್ರಾ.ಪಂ, ಫೆ.12ರಂದು ಪಡುಪೆರಾರ, ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿ ಕಂದಾವರ ಗ್ರಾ.ಪಂ. ಸಭಾಭವನ, ಫೆ.13ರಂದು ಗುರುಪುರ, ಮೂಡುಶೆಡ್ಡೆ ಗ್ರಾ.ಪಂ.ಗೆ ಗುರುಪುರ ಗ್ರಾ.ಪಂ. ಸಭಾಭವನದಲ್ಲಿ, ಫೆ.17ರಂದು ಜೋಕಟ್ಟೆ, ಚೆಳ್ಯಾರು, ಬಾಳ ಗ್ರಾ.ಪಂ.ಗೆ ಜೋಕಟ್ಟೆ ಗ್ರಾ.ಪಂ.ನಲ್ಲಿ, ಫೆ.18ರಂದು ಸೂರಿಂಜೆ, ಎಕ್ಕಾರು, ಪೆರ್ಮುದೆ ಗ್ರಾ.ಪಂ.ಗೆ ಸೂರಿಂಜೆ ಗ್ರಾ.ಪಂ.ನಲ್ಲಿ, ಫೆ.19ರಂದು ಎಡಪದವು, ಕುಪ್ಪೆಪದವು, ಮುತ್ತೂರು ಗ್ರಾ.ಪಂ.ಗೆ ಕುಪ್ಪೆಪದವು ಗ್ರಾ.ಪಂ. ಸಭಾಭವನದಲ್ಲಿ ಶಿಬಿರ ನಡೆಯಲಿದೆ. ಪ್ರತಿ ದಿನ ಬೆಳಗ್ಗೆ 10:30ರಿಂದ ಶಿಬಿರ ಆರಂಭವಾಗಲಿದೆ ಎಂದರು.

ಗೃಹಲಕ್ಷ್ಮೀ ಯೋಜನೆಯಲ್ಲಿ ಶೇ.84 ಪ್ರಗತಿ

ಮಂಗಳೂರು ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ 99,104 ಗುರಿ ಹೊಂದಿದ್ದು,83,395 ಮಂದಿ ನೋಂದಣಿ ಮಾಡಿದ್ದು ಶೇ.84 ಪ್ರಗತಿ ಸಾಧಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಲ್ಲಿ 2,35,485 ಗುರಿಯಲ್ಲಿ 1,77,406 ಮಂದಿ ನೋಂದಾಯಿಸಿದ್ದಾರೆ. ಇದರಲ್ಲಿ 1,80,925 ಮಂದಿ ಫಲಾನುಭವಿಗಳಿದ್ದು ಶೇ.98 ಪ್ರಗತಿ ಸಾಧಿಸಲಾಗಿದೆ. ಅನ್ನಭಾಗ್ಯದಲ್ಲಿ 38,95,684 ಗುರಿಯಲ್ಲಿ 35,28,180 ಮಂದಿ ನೋಂದಾಯಿಸಿದ್ದಾರೆ. 3,19,40,620 ರೂ. ಮೊತ್ತ ಅವರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದರು.

*ಯುವನಿಧಿ 1,143 ಮಂದಿಗೆ ಆರ್ಥಿಕ ನೆರವು: ಯುವನಿಧಿ ಯೋಜನೆಯಲ್ಲಿ 1,484 ಮಂದಿ ಅರ್ಜಿದಾರರಲ್ಲಿ 1,143 ಮಂದಿಗೆ ಆರ್ಥಿಕ ನೆರವು ದೊರೆತಿದೆ. ಶಕ್ತಿ ಯೋಜನೆಯಲ್ಲಿ ಎಲ್ಲ ಕಡೆಗಳಲ್ಲೂ ಉತ್ತಮ ಸ್ಪಂದನೆ ದೊರೆತಿದೆ .ಯುವನಿಧಿ ಯೋಜನೆಗೆ ಅರ್ಹ ನಿರುದ್ಯೋಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧ್ಯಕ್ಷ ಸುರೇಂದ್ರ ಕಂಬಳಿ ತಿಳಿಸಿದರು.

ಸಮಿತಿ ಸದಸ್ಯರಾದ ಆಲಸ್ಟನ್ ಡಿಕುನ್ನಾ, ಶ್ರೀಧರ ಪಂಜ, ನವಾಜ್, ವಿದ್ಯಾ, ಮುಸ್ತಫಾ, ಶಾಂತಲಾ ಗಟ್ಟಿ, ಆಶಾ, ಕಾರ್ಯದರ್ಶಿ ಮಹೇಶ್ ಹೊಳ್ಳ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X