Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಸಾಮಾಜಿಕ ಜಾಲತಾಣದಲ್ಲಿ...

ಮಂಗಳೂರು| ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡಿದ ಆರೋಪ: 6 ಮಂದಿ ಸೆರೆ

ವಾರ್ತಾಭಾರತಿವಾರ್ತಾಭಾರತಿ4 Jun 2025 9:41 PM IST
share
ಮಂಗಳೂರು| ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡಿದ ಆರೋಪ: 6 ಮಂದಿ ಸೆರೆ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡಿದ ಆರೋಪದಲ್ಲಿ 6 ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಹೆಜಮಾಡಿಯ ಅಸ್ಲಾಂ (23 ), ಕಾಟಿಪಳ್ಳದ ಚೇತನ್ (20), ಹಳೆಯಂಗಡಿ ನಿತಿನ್ ಅಡಪ (23), ಫರಂಗಿಪೇಟೆಯ ರಿಯಾಝ್ ಇಬ್ರಾಹೀಂ (30), ಕಸಬಾ ಬೆಂಗ್ರೆಯ ಜಮಾಲ್ ಝಕೀರ್(21) ಮತ್ತು ಕೊಳವೈಲ್‌ನ ಗುರುಪ್ರಸಾದ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಅಸ್ಲಾಂ ಎಂಬಾತನು ಸೌದಿ ಅರೇಬಿಯಾದಿಂದ team_jokerzzz._ ಎಂಬ ಇನ್‌ಸ್ಟಾಗ್ರಾಂ ಮೂಲಕ ಪ್ರಚೋದನಾಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಕಲಂ.192, 353 (2)ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿ ಅಸ್ಲಾಂ ವಿರುದ್ಧ ಎಲ್‌ಒಸಿ ಹೊರಡಿಸಿ, ದಸ್ತಗಿರಿ ಮಾಡಲಾಗಿದೆ.

ಚೇತನ್ ಎಂಬಾತನು ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ನ್ನು ಬಳಸಿಕೊಂಡು team_karna_surathkal ಇನ್‌ಸ್ಟಾಗ್ರಾಂ ಪೇಜ್‌ನ್ನು ತೆರೆದಿದ್ದು, ಈ ಪೇಜ್‌ನಲ್ಲಿ ಚೆನ್ನಪ್ಪ ಯಾನೆ ಮುತ್ತು ಸುರತ್ಕಲ್ ಎಂಬಾತನು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ. 196(1), 353(2) ರಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಚೇತನ್ ಮತ್ತು ನಿತಿನ್ ಅಡಪ ಎಂಬವರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿಡಲಾಗಿದೆ.

ರಿಯಾಝ್ ಇಬಾಹೀಂ ಎಂಬಾತನು ಸೌದಿ ಅರೇಬಿಯಾದಿಂದ Beary_royal_nawab ಎಂಬ ಇನ್‌ಸ್ಟಾಗ್ರಾಮ್ ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ. 353 (2) ರಂತೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ.353 (1) (ಸಿ), 353(2) ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ. ಈತನನ್ನು ಎಲ್‌ಒಸಿ ಹೊರಡಿಸಿ ದಸ್ತಗಿರಿ ಮಾಡಲಾಗಿದೆ.

ಆರೋಪಿ ಜಮಾಲ್ ಝಾಕೀರ್ Troll_bengare_ro_makka ಇನ್‌ಸ್ಟಾಗ್ರಾಮ್ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಲಂ ಬಿಎನ್‌ಎಸ್ 353 (1) (ಸಿ), 353(2) ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ

ಗುರು ಪ್ರಸಾದ್ ಎಂಬಾತನು Guru dprasad Haleyangadi ಎಂಬ ಫೇಸ್‌ ಬುಕ್ ಖಾತೆಯ ಮುಖಾಂತರ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ.196(1) (ಎ),353(2),79,56 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ‌ ಗಳಲ್ಲಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರು ವಿಶೇಷ ತಂಡ ರಚನೆ ಮಾಡಿದ್ದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, , ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್ ಮತ್ತು ರವಿಶಂಕರ್ (ಅ ಮತ್ತು ಸಂ) ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡಗಳಿಂದ ತನಿಖೆ ಮುಂದುವರೆಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X