Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ| ಆಮೆಚೂರು ಕಬಡ್ಡಿ ಅಸೋಸಿಯೇಷನ್...

ಬಂಟ್ವಾಳ| ಆಮೆಚೂರು ಕಬಡ್ಡಿ ಅಸೋಸಿಯೇಷನ್ ಅನುಮತಿ ಇಲ್ಲದ ಪಂದ್ಯಾಟಗಳಲ್ಲಿ ಭಾಗವಹಿಸಿದ ತಂಡ, ಆಟಗಾರರಿಗೆ 6 ತಿಂಗಳ ಅಮಾನತು

ವಾರ್ತಾಭಾರತಿವಾರ್ತಾಭಾರತಿ21 Oct 2025 11:40 PM IST
share
ಬಂಟ್ವಾಳ| ಆಮೆಚೂರು ಕಬಡ್ಡಿ ಅಸೋಸಿಯೇಷನ್ ಅನುಮತಿ ಇಲ್ಲದ ಪಂದ್ಯಾಟಗಳಲ್ಲಿ ಭಾಗವಹಿಸಿದ ತಂಡ, ಆಟಗಾರರಿಗೆ 6 ತಿಂಗಳ ಅಮಾನತು

ಬಂಟ್ವಾಳ : ತಾಲೂಕು ಆಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಅನುಮತಿ ಇಲ್ಲದ (ಬ್ಲಾಕ್ ಮ್ಯಾಚ್) ಪಂದ್ಯಾಟಗಳಲ್ಲಿ ಭಾಗವಹಿಸಿದ ತಂಡ ಹಾಗೂ ಆಟಗಾರರನ್ನು ಮುಂದಿನ 6 ತಿಂಗಳ ಕಾಲ ಅಮಾನತಿಗೆ ಒಳಪಡಿಸಲಾಗುವುದು ಎಂದು ಅಸೋಸಿಯೇಷನ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾ ಭವನದಲ್ಲಿ ನಡೆದ ಬಂಟ್ವಾಳ ತಾಲೂಕು ಅಮೆಚೂರು ಕಬ್ಬಡಿ ಅಸೋಸಿಯೇಷನ್, ಅಮೆಚೂರ್ ಕಬ್ಬಡಿ ತೀರ್ಪುಗಾರರ ಮಂಡಳಿ, ತಾಲೂಕಿನ ಕಬ್ಬಡಿ ಆಯೋಜಕರು, ಸಂಘಟಕರು, ತರಬೇತುದಾರರು ಹಾಗೂ ಆಟಗಾರರ ಸಮಾಲೋಚನಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಬ್ಲ್ಯಾಕ್ ಮ್ಯಾಚ್ ಪಂದ್ಯಾಟದಲ್ಲಿ ಭಾಗವಹಿಸಿದ ಆಟಗಾರರಿಗೆ ಅಮಾನತಿಗೆ ಜೊತೆಗೆ ಅಮೆಚೂರು ಕಬಡ್ಡಿ ಫೆಡರೇಷನ್ ವತಿಯಿಂದ ಆಯೋಜನೆಗಳ್ಳುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪಂದ್ಯಾಟಗಳಿಗೆ ಆಯ್ಕೆಯನ್ನು ನೀಡದಿರುವ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ನಿರ್ಣಯ ಕೈಗೊಳ್ಳಲಾಗಿದೆ.

ಅಮೆಚೂರ್ ಕಬ್ಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ತಾಲೂಕಿನಲ್ಲಿ ನಡೆಯುವ ಎಲ್ಲಾ ಹಂತದ ಕಬಡ್ಡಿ ಆಯೋಜನೆಯ ಬಗ್ಗೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ಪೂರ್ವಾನುಮತಿ ಕಡ್ಡಾಯಗೊಳಿ ಸುವುದು , ಅನುಮತಿ ಪಡೆದ ಹಂತದ ಹೊರತು ಇತರ ಹಂತದ ಪಂದ್ಯಾಟ ಆಯೋಜಿಸಬಾರದು, ತಾಲೂಕಿನಲ್ಲಿ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ವಿದ್ಯಾ ಸಂಸ್ಥೆಯ ತಂಡಗಳು ಭಾಗವಹಿಸುವುದಾದರೆ ಪ್ರಸ್ತುತ ಅವರು ಅದೇ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ದೃಡೀಕರಣ ಪತ್ರ ಹೊಂದಿರಬೇಕು, ತಾಲೂಕಿನಲ್ಲಿ ನಡೆಯುವ ಎಲ್ಲಾ ಪಂದ್ಯಾಟಗಳು ಕಾನೂನು ಸುವ್ಯವಸ್ಥೆಯ ಕಾರಣಕ್ಕಾಗಿ ಮತ್ತು ಆಟಗಾರರು ಮತ್ತು ತೀರ್ಪುಗಾರರ ಆರೋಗ್ಯದ ದೃಷ್ಟಿಯಿಂದ ರಾತ್ರಿ 10 ಒಳಗಾಗಿ ಮುಗಿಸುವುದು, ಬಂಟ್ವಾಳ ಅಮೆಚೂರ್ ಕಬಡ್ಡಿ ತೀರ್ಪುಗಾರರ ಮಂಡಳಿಯ ತೀರ್ಪುಗಾರರು ಉದ್ದೇಶ ಪೂರ್ವಕ ಅಥವಾ ತಪ್ಪಾಗಿ ತೀರ್ಪು ನೀಡಿದಲ್ಲಿ ಲಿಖಿತವಾಗಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಥವಾ ತೀರ್ಪುಗಾರ ಮಂಡಳಿಯ ಅಧ್ಯಕ್ಷರಿಗೆ ತಿಳಿಸುವುದು, ಇಂತಹ ದೂರುಗಳು ಬಂದಲ್ಲಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವುದು, ತೀರ್ಪುಗಾರಿಕೆಯ ಸಂದರ್ಭದಲ್ಲಿ ತೀರ್ಪುಗಾರರ ಜೊತೆಗೆ ಅನುಚಿತ ವಾಗಿ ವರ್ತಿಸಿದಲ್ಲಿ ಅಂತಹ ಆಟಗಾರರನ್ನು ಅಮಾನತಿನಲ್ಲಿ ಇಡುವುದು ಮೊದಲಾದ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಪುಷ್ಪರಾಜ್ ಚೌಟ ಮಾತನಾಡಿ ತಾಲೂಕಿನಲ್ಲಿ ನಡೆಯುವ ಪಂದ್ಯಾಟಗಳಲ್ಲಿ ಶಿಸ್ತು ಬದ್ಧವಾಗಿ ಭಾಗವಹಿಸಿದ ತಂಡದ ಆಟಗಾರರಿಗೆ ಅಸೋಸಿಯೇಷನ್ ವತಿಯಿಂದ ಉಚಿತ ಇನ್ಸೂರೆನ್ಸ್ ವ್ಯವಸ್ಥೆಯನ್ನು ಮಾಡುವ ಬಗ್ಗೆ ಪ್ರಯತ್ನಿಸಲಾಗುವುದು ಎಂದರು.

ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷ ಬೇಬಿ ಕುಂದರ್ ಕಾರ್ಯಧ್ಯಕ್ಷ ಮಹಮ್ಮದ್ ಝಕರಿಯ ಕಲ್ಲಡ್ಕ, ಉಪಾಧ್ಯಕ್ಷರಾದ ಬಾಬು ಮಾಸ್ಟರ್, ನಾಗೇಶ್ ಪೂಜಾರಿ ಏಲಬೆ, ಸೇಸಪ್ಪ ಮೂಲ್ಯ ತುಂಬೆ, ಸಂಘಟನಾ ಕಾರ್ಯದರ್ಶಿಗಳಾದ ರೂಪಿತ್ ರೈ, ಮೂಸಾ ಕರಿಂ ಮಾಣಿ, ತೀರ್ಪುಗಾರರ ಮಂಡಳಿ ಕನ್ವೀನರ್ ಹಬೀಬ್ ಮಾಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಬಡ್ಡಿ ಪ್ರಮುಖರಾದ ನಿತಿನ್ ಶೆಟ್ಟಿ ಶಂಭೂರ್, ಇಬ್ರಾಹಿಂ ಕಲ್ಲಡ್ಕ, ಮನ್ಸೂರ್ ಕುಕ್ಕಾಜೆ, ಸಂಪತ್ ಕಡೇಶ್ವಾಲ್ಯ, ಗಣೇಶ್ ಶಂಭೂರ್, ಸೈಪುದ್ದೀನ್, ನೌಶಾದ್ ಕಲ್ಪನೆ, ವಿನಯ ನಡುಮೊಗರು, ಸಿದ್ದಿಕ್ ಕುಕ್ಕಾಜೆ, ಸಲೀಂ, ಹೈಪ್ ಬಂಗೇರಕೋಡಿ, ರಂಜಿತ್ ಜಾರಂದಗುಡ್ಡೆ ವಿವಿಧ ಸಲಹೆ ನೀಡಿದರು.

ಇದೇ ಸಂದರ್ಭ ರಾಜಸ್ಥಾನದ ಜೈಪುರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ತೀರ್ಪುಗಾರರ ಪರೀಕ್ಷೆಯಲ್ಲಿ ತೇರ್ಗಡೆ ಯಾದ ದೀಪಕ್ ಪೆರಾಜೆ ಅವರನ್ನು ಅಭಿನಂದಿಸಲಾಯಿತು.

ಬಂಟ್ವಾಳ ತೀರ್ಪುಗಾರರ ಮಂಡಳಿಯ ಅಧ್ಯಕ್ಷ ಸುರೇಶ್ ಮೈರಡ್ಕ ಪ್ರಸ್ತಾವನೆಗೈದರು. ಬಂಟ್ವಾಳ ತಾಲೂಕು ಅಮೆಚೂರ್ ಕಬ್ಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಲತೀಪ್ ನೇರಳಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ದೀಪಕ್ ಪೆರಾಜೆ ವಂದಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X