Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯೆನೆಪೋಯ ಆಸ್ಪತ್ರೆಯಲ್ಲಿ 7ರ ಬಾಲೆಗೆ...

ಯೆನೆಪೋಯ ಆಸ್ಪತ್ರೆಯಲ್ಲಿ 7ರ ಬಾಲೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ7 May 2025 6:13 PM IST
share
ಯೆನೆಪೋಯ ಆಸ್ಪತ್ರೆಯಲ್ಲಿ 7ರ ಬಾಲೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಕೊಣಾಜೆ: ದೇರಳಕಟ್ಟೆಯ ಝುಲೇಖ ಯೇನೆಪೋಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಂಡವು ಅರಿವಳಿಕೆ ತಜ್ಞರು ಹಾಗೂ ಮಕ್ಕಳ ಚಿಕಿತ್ಸಾ ವಿಭಾಗದ ತಜ್ಞರ ಸಹಕಾರದೊಂದಿಗೆ ಇತ್ತೀಚೆಗೆ ಗಂಟಲಿನಲ್ಲಿ ಥೈರಾಯಿಡ್ ಕ್ಯಾನ್ಸರ್ ಗೆ ಗುರಿಯಾಗಿದ್ದ 7ರ ಹರೆಯದ ಬಾಲೆಗೆ ಕ್ಲಿಷ್ಟಕರವಾದ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು,‌ ಬಾಲಕಿ ಸಂಪೂರ್ಣವಾಗಿ ಗುಣಮುಖಳಾಗಿದ್ದಾಳೆ ಎಂದು ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಹಬೀಬ್ ರೆಹಮಾನ್ ಹೇಳಿದರು.

ಅವರು ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ಮಗುವಿನ ಕತ್ತಿನ ಎರಡೂ ಬದಿಗಳಿಗೆ ಮತ್ತು ಕತ್ತಿನ ಮಧ್ಯ ಭಾಗಕ್ಕೆ ಕ್ಯಾನ್ಸರ್ ಹರಡಿದ್ದರಿಂದ ಅತ್ಯಂತ ಹೆಚ್ಚಿನ ಅಪಾಯ ಮತ್ತು ಸಂಕೀರ್ಣವಾದ ಶಸ್ತ್ರಚಿಕಿತ್ಸೆಯಾಗಿದ್ದು ಸುಮಾರು 9 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ತಜ್ಞ ವೈದ್ಯರ ಸಲಹೆಯಂತೆ ಬಾಲೆಯ ಪೋಷಕರು ದೇರಳಕಟ್ಟೆಯ ಯೆನೆಪೋಯ ಝುಲೇಖ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತಪಾಸಾಣೆಗೆ ಬಂದಿದ್ದರು. ಕ್ಯಾನ್ಸರ್ ಎರಡನೇ ಹಂತಕ್ಕೆ ಬಂದಿರುವುದನ್ನು ಪತ್ತೆ ಹಚ್ಚಿದ ತಂಡ ಕಾರ್ಯರೂಪಕ್ಕೆ ಬಂದಿತು. ಡಾ. ಅನಿತಾ ಪ್ರಭು ಮತ್ತು ಡಾ. ರಾಮನಾಥ್ ಮಹಾಲೆ ಅವರು ಮಗುವನ್ನು ನೋಡಿಕೊಳ್ಳುತ್ತಿದ್ದರು.

ಡಾ. ಜಲಾಲುದ್ದೀನ್ ಅಕ್ಬರ್ ನೇತೃತ್ವದಲ್ಲಿ ಡಾ. ಎಚ್. ಟಿ. ಅಮರ್ ರಾವ್ ಮತ್ತು ಡಾ. ನೂರ್ ಮೊಹಮ್ಮದ್, ಅರಿವಳಿಕೆ ತಜ್ಞರಾದ ಡಾ. ಪ್ರೀತಿ ಜೊತೆಗೂಡಿ ಥೈರಾಯ್ಡ್ ಗ್ರಂಥಿ ಮತ್ತು ಕತ್ತಿನ ಮಧ್ಯಭಾಗದಿಂದ ರೋಗ ಪೀಡಿತ ದುಗ್ಧರಸ ಗ್ರಂಥಿಗಳನ್ನು ತೆಗೆದುಹಾಕುವ ಮೂಲಕ ಪ್ರಮುಖ ಶಸ್ತ್ರ ಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾದರು.

ಕ್ಯಾನ್ಸರ್ ಚಿಕಿತ್ಸಾ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದಿನ್ ಅಕ್ಬರ್ ಮಾತನಾಡಿ, ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾಥೈರಾಯ್ಡ್ ಗ್ರಂಥಿಗಳನ್ನು ಗುರುತಿಸಲು ಮತ್ತು ಸಂರಕ್ಷಿಸಲು ಇಂಡೋಸೈನೈನ್ ಗ್ರೀನ್ ಎಂಬ ಹೊಸ ತಂತ್ರವನ್ನು ತಂಡ ಬಳಸಲಾಗಿದ್ದು ಶಸ್ತ್ರಚಿಕಿತ್ಸೆಯನ್ನು ಸುರಕ್ಷಿತ ಮತ್ತು ರೋಗಿಯ ದೀರ್ಘಕಾಲೀನ ಆರೋಗ್ಯವನ್ನು ಖಚಿತಪಡಿಸುತ್ತದೆ. ಒಂದು ವಾರದ ಹಿಂದೆ ನಡೆದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಮಗು ಈಗ ಚೇತರಿಸಿಕೊಳ್ಳುತ್ತಿದೆ ಎಂದರು.

ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಮಾತನಾಡಿ, ಬಾಲೆಯ ಶಸ್ತ್ರಚಿಕಿತ್ಸೆ ಅಯುಷ್ಮಾನ್ ಮೂಲಕ ಸರಕಾರಿ ಉಚಿತ ಯೋಜನೆ ಮೂಲಕ ಸಂಪೂರ್ಣ ಉಚಿತವಾಗಿ ಮಾಡಿದ್ದೇವೆ. ಹಾಗೆಯೇ ಸುರಕ್ಷಾ, ಯಶಸ್ವಿನಿ, ಅಯುಷ್ಮಾನ್, ಬಿಪಿಎಲ್ ಮೊದಲಾದ ಎಲ್ಲ ಸರಕಾರಿ ಯೋಜನೆಯನ್ನು ಉಚಿತ ವಾಗಿ ಹಾಗೂ ಎಪಿಎಲ್ ಗೆ 40ಶೇ. ರಿಯಾಯಿತಿಯಲ್ಲಿ ಒಂದೇ ಸೂರಿನಡಿಯಲ್ಲಿ ನೀಡುವ ವ್ಯವಸ್ಥೆ ಇರೋದ್ರಿಂದ ಜುಲೇಖ ಆಸ್ಪತ್ರೆ ಆರಂಭವಾದ ಬಳಿಕ ಸಾವಿರಕ್ಕೂ ಅಧಿಕ ಅಂದ್ರೆ 95% ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದೇವೆ ಎಂದರು.

ಝುಲೇಖ ಯೆನೆಪೋಯ ಆಂಕೊಲಾಜಿ ಸಂಸ್ಥೆಯಲ್ಲಿ ವೈದ್ಯಕೀಯ ತಂಡವು ಒದಗಿಸಿದ ಆರೈಕೆಗಾಗಿ ರೋಗಿಯ ಕುಟುಂಬವು ಕೃತಜ್ಞತೆಯನ್ನು ಸಲ್ಲಿಸಿತು.

ಈ ಸಂದರ್ಭದಲ್ಲಿ ವೈದ್ಯರಾದ ಡಾ. ಎಚ್. ಟಿ. ಅಮರ್ ರಾವ್, ಡಾ. ನೂರ್ ಮೊಹಮ್ಮದ್, ಡಾ. ಪ್ರೀತಿ, ಡಾ. ಮೊಹಮ್ಮದ್ ಸಾಬೀತ್ , ವೈದ್ಯರಾದ ಡಾ. ಭುವನೀ ಪೌಲ್, ಡಾ. ಅನಿತಾ ಪ್ರಭು ಮತ್ತು ಡಾ. ರಾಮನಾಥ್ ಮಹಲೆ, ಡಾ. ಸತ್ಯವತಿ, ಮಾಧ್ಯಮ ಸಂಯೋಜಕ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

"ಹಲವು ವರ್ಷದ ಹಿಂದೆ ನಾನು ಎಸ್ ಎಸ್ ಎಲ್ ಸಿಯಲ್ಲಿ ಇರುವಾಗ ಇಂತಹ ಕ್ಲಿಷ್ಟಕರವಾದ ಸಮಸ್ಯೆ ಎದುರಾಗಿತ್ತು. ಆ ಅವಧಿಯಲ್ಲಿ ವೈದ್ಡಾಯರಾದ ಡಾ. ಜಲಾಲುದ್ದಿನ್ ನನ್ನ ಶಸ್ತ್ರ ಚಿಕಿತ್ಸೆ ಮಾಡಿದ್ದರು. ಇಂದಿಗೂ ಆರೋಗ್ಯ ಚೆನ್ನಾಗಿದೆ. ರೋಗಿ ಭಯ ಆತಂಕಕ್ಕೆ ಒಳಗಾಗದೆ ಸವಾಲು ಎದುರಿಸಬೇಕು. ಯಾರೂ ಭಯ ಪಡೋದು ಬೇಡ, ಕ್ಯಾನ್ಸರ್ ಗುಣಪಡಿಸಲು ಸಾಧ್ಯ ಇರುವ ರೋಗ".

-ಜೇಸಿಲ್ ಡಿಸೋಜ, ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X