Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ತಾಲೂಕಿನ 7,563 ಬಿಪಿಎಲ್...

ಉಳ್ಳಾಲ ತಾಲೂಕಿನ 7,563 ಬಿಪಿಎಲ್ ಕಾರ್ಡುದಾರರು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ: ರಫೀಕ್ ಅಂಬ್ಲಮೊಗರು

ವಾರ್ತಾಭಾರತಿವಾರ್ತಾಭಾರತಿ30 Oct 2024 4:46 PM IST
share
ಉಳ್ಳಾಲ ತಾಲೂಕಿನ 7,563 ಬಿಪಿಎಲ್ ಕಾರ್ಡುದಾರರು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ: ರಫೀಕ್ ಅಂಬ್ಲಮೊಗರು

ಉಳ್ಳಾಲ : ರಾಜ್ಯ ಆಹಾರ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಉಳ್ಳಾಲ ತಾಲೂಕಿನ 7,563 ಬಿಪಿಎಲ್ ಕಾರ್ಡುದಾರರು ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇದರಲ್ಲಿ 420 ಮಂದಿಯ ಬಿಪಿಎಲ್ ಕಾರ್ಡುಗಳನ್ನು ಅಮಾನತಿನಲ್ಲಿರಿಸಲಾಗಿದೆ. ಶೀಘ್ರವೇ ರಾಜ್ಯ ಸರಕಾರ ಹಾಗೂ ರಾಜ್ಯ ಆಹಾರ ಇಲಾಖೆ ಸಚಿವರು ಗೊಂದಲಗಳನ್ನು ಪರಿಹರಿಸಬೇಕು ಎಂದು ಉಳ್ಳಾಲ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಫೀಕ್ ಅಂಬ್ಲಮೊಗರು ತಿಳಿಸಿದರು.

ತೊಕ್ಕೊಟ್ಟು ಸೇವಾಸೌಧದ 2ನೇ ಮಹಡಿಯಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳ್ಳಾಲ ತಾಲೂಕಿನಲ್ಲಿ ಸುಮಾರು 29415 ಬಿಪಿಎಲ್ ಪಡಿತರಿದ್ದಾರೆ. ಇದರಲ್ಲಿ 420 ಪಡಿತರ ಚೀಟಿಯನ್ನು ಹಲವು ಮಾನದಂಡಗಳ ಆಧಾರದ ಮೇಲೆ ಅಮಾನತಿನಲ್ಲಿರಿಸಲಾಗಿದೆ. ಅಲ್ಲದೆ 7563 ಬಿಪಿಎಲ್ ಪಡಿತರನ್ನು ಗ್ರಾಮ ಆಡಳಿತಾಧಿಕಾರಿಗಳ ವರದಿಗಾಗಿ ಕಳುಹಿಸಲಾಗಿದೆ. ಕೇಂದ್ರಕ್ಕೆ ಸೇವಾ ತೆರಿಗೆ ಕಟ್ಟಿದವರನ್ನು ಅಮಾನತಿನಲ್ಲಿರಿಸಿದ್ದು, ಮನೆ ಕಟ್ಟುವ ಉದ್ದೇಶದಿಂದ ಬ್ಯಾಂಕ್ ಸಾಲ ಪಡೆಯಲು ಹಲವು ಕುಟುಂಬಸ್ಥರು ಸೇವಾ ತೆರಿಗೆ ಪಾವತಿಸಿರುತ್ತಾರೆ. ಅದರ ಮೇಲೆ ಮಾನದಂಡ ಪ್ರಯೋಗ ಸೂಕ್ತವಲ್ಲ. ಅಮಾನತಿನಲ್ಲಿರಿಸಲಾದ ಪಡಿತರ ಚೀಟಿದಾರರ ವರದಿಯನ್ನು ಆದಷ್ಟು ಬೇಗ ಸಂಗ್ರಹಿಸಿ ಸರಿಪಡಿಸಬೇಕು, ಅಲ್ಲದೆ ವರದಿಗಾಗಿ ಕಾದಿರಿಸಿದ 7563 ಬಿಪಿಎಲ್ ಪಡಿತರ ವಿವರಗಳನ್ನು ಸರಿಪಡಿಸಿ, ಯೋಜನೆಗಳಿಂದ ವಂಚಿತರಾಗದಂತೆ ಕ್ರಮಕೈಗೊಳ್ಳಬೇಕಿದೆ . ಈಗಾಗಲೇ ಉಳ್ಳಾಲ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪತ್ರದ ಮೂಲಕ ಗೊಂದಲಗಳನ್ನು ನಿವಾರಿಸಲು ರಾಜ್ಯ ಆಹಾರ ಇಲಾಖೆಯ ಗಮನ ಸೆಳೆದಿದೆ. ಆಯಾಯ ಗ್ರಾಮ ಪಂಚಾಯತಿನ ಸದಸ್ಯರು ಗ್ರಾಮಕರಣಿಕರ ಜತೆಗೆ ಸಹಕರಿಸಬೇಕಿದೆ ಎಂದರು.

ಉಳ್ಳಾಲ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆ ಅನುಷ್ಠಾನ 14 ನೇ ಕಂತು ದೀಪಾವಳಿ ಹಬ್ಬದ ಸಂಭ್ರಮದಂದೇ ಬಿಡುಗಡೆಯಾಗಲಿದೆ. ಕೆಲವರಿಗೆ 2-3 ಕಂತುಗಳು ಪಾವತಿಯಾದ ನಂತರ ನಿಂತಿದೆ. ಇದು ಆಧಾರ್ - ಪ್ಯಾನ್ ಲಿಂಕ್ ನಿಂದಾಗಿ ಇನ್ಕಮ್ ಟ್ಯಾಕ್ಸ್ ಕಟ್ಟಿದ ವಿವರ ಸಾಫ್ಟ್ ವೇರ್ ನಲ್ಲಿ ಅಪ್ಡೇಟ್ ಆಗಿರುವ ಸಾಧ್ಯತೆಯಿಂದ ಆಗಿರುವ ಗೊಂದಲಗಳು. ಅಂತಹವರ ಸ್ಟೇಟಸ್ ಪರಿಶೀಲಿಸ ಬೇಕಿದೆ. ಹಲವರ ಸ್ಟೇಟಸ್ ನಲ್ಲಿ ಜಿ.ಎಸ್.ಟಿ ನಮೂದಾಗಿದೆ. ಅದನ್ನು ರಾಜ್ಯ ದ ಆರ್ಥಿಕ ಇಲಾಖೆ ಅಧಿಕಾರಿಗಳೇ ಸರಿಪಡಿ ಸಬೇಕಿದೆ. ಅಂತಹ ಫಲಾನುಭವಿಗಳು ತೊಕ್ಕೊಟ್ಟು ಸೇವಾಸೌಧ ಮೂರನೇ ಮಹಡಿಯಲ್ಲಿ ನವೆಂಬರ್ ತಿಂಗಳಿನಿಂದ ಆರಂಭವಾಗುವ ಗ್ಯಾರಂಟಿ ಅನುಷ್ಠಾನ‌ ಕಚೇರಿ ಅಥವಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಲ್ಲಿ ಸಂಪರ್ಕಿಸಬಹುದು ಎಂದರು.

ಈ ಸಂದರ್ಭ ಸದಸ್ಯರಾದ ವಿಲ್ಫ್ರೆಡ್ ಡಿಸೋಜ, ದೇವಾನಂದ ಶೆಟ್ಟಿ, ಜೆಸಿಂತಾ ಮೆಂಡೋನ್ಸಾ, ರೇವತಿ ವಿಶ್ವನಾಥ್, ಸಲಾಂ ಕೆ.ಸಿ.ರೋಡ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X