ಜು. 9: ಉಳ್ಳಾಲ ಅಗ್ನಿಶಾಮಕ ಠಾಣೆ ಕಟ್ಟಡಕ್ಕೆ ಶಂಕುಸ್ಥಾಪನೆ
ಮಂಗಳೂರು, ಜು.8: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜುಲೈ 9 ರಂದು ಬೆಳಿಗ್ಗೆ 10ಗಂಟೆಗೆ ಪಜೀರು ಕೈರಂಗಳದಲ್ಲಿ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಗೌರವ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ.ಜಿ ಪರಮೇಶ್ವರ ಕಟ್ಟಡದ ಶಂಕುಸ್ಥಾಪನೆ ಮಾಡಲಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





