ಧರ್ಮಸ್ಥಳ ಪ್ರಕರಣ: 9ನೇ ಸ್ಥಳದಲ್ಲಿ ಲಭಿಸದ ಮೃತದೇಹದ ಅವಶೇಷ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ರಾಷ್ಟ್ರೀಯ ಹೆದ್ದಾರಿಯ ಬದಿಯ ಅರಣ್ಯ ಪ್ರದೇಶದಲ್ಲಿ ತೋರಿಸಿರುವ ಒಂಭತ್ತನೇ ಜಾಗದ ಅಗೆಯುವಿಕೆ ಪೂರ್ಣಗೊಂಡಿದ್ದು, ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ 5ನೇ ದಿನ ಕಾರ್ಯಾಚರಣೆ ಮುಂದುವರಿದಿದೆ.
ಇಂದಿನ ಕಾರ್ಯಾಚರಣೆ ಅತ್ಯಂತ ಮಹತ್ವದ್ದಾಗಿದೆ. ಇಂದು ಒಂದಕ್ಕಿತ ಹೆಚ್ಚು ಜಾಗಗಳನ್ನು ಅಗೆಯುವ ಸಿದ್ದತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ಆಗಮಿಸಿದ್ದಾರೆ.
ಜಾಗ ಒಂಭತ್ತರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಮಧ್ಯಾಹ್ನದ ಬಳಿಕ 10ನೇ ಸ್ಥಳದಲ್ಲಿ ಅಗೆಯುವ ಕಾರ್ಯ ನಡೆಯಲಿದೆ.
ಇದಕ್ಕೂ ಮೊದಲು ಅಗೆಯುವ ಪ್ರಕ್ರಿಯೆ ಹೊರಗೆ ಕಾಣಿಸದಂತೆ ದೂರುದಾರು ಗುರುತಿಸಿರುವ ರಸ್ತೆ ಬದಿಯಲ್ಲೇ ಇರುವ 9, 10 ಮತ್ತು 11ನೇ ಜಾಗಗಳನ್ನು ಪರದೆ ಕಟ್ಟಿ ಮುಚ್ಚಲಾಗಿದೆ.
ಎಸ್ಪಿ ದರ್ಜೆಯ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಸಹಿತ ಎಸ್ಐಟಿ ಅಧಿಕಾರಿಗಳ ಜೊತೆಗೆ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರಿನ ಕೆಎಂಸಿ ವೈದ್ಯರ ತಂಡ, ಎಫ್.ಎಸ್.ಎಲ್. ತಂಡ, ಐ.ಎಸ್.ಡಿ. ಹಾಗೂ ಇತರ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.







