ನ.1: ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು, ಅ.31:ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನ.1ರಂದು ಬೆಳಗ್ಗೆ 7:10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ, 7:50ಕ್ಕೆ ನಗರದ ಸರ್ಕ್ಯೂಟ್ ಹೌಸ್‌ಗೆ ಆಗಮಿಸುವರು. 9ಕ್ಕೆ ನಗರದ ನೆಹರು ಮೈದಾನದಲ್ಲಿ ದ.ಕ.ಜಿಲ್ಲಾಡಳಿತ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.
ಮಧ್ಯಾಹ್ನ 12:30ಕ್ಕೆ ಮೂಡಬಿದಿರೆ ಅರಮನೆ ಬಾಗಿಲು ರಸ್ತೆಯ ಚೌಟರ ಅರಮನೆ ಮುಂಭಾಗದಲ್ಲಿ ಚೌಟ ರಾಣಿ ಅಬ್ಬಕ್ಕರ 500ನೇ ಜನ್ಮ ಶತಮಾನೋತ್ಸವ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್ ವತಿಯಿಂದ ನಿರ್ಮಿಸಲಾ ಗಿರುವ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ, ಸಂಜೆ 4ಕ್ಕೆ ಎಂ. ಫ್ರೆಂಡ್ಸ್ ವತಿಯಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಯೋಗ ಸಭಾಂಗಣದಲ್ಲಿ ಕಾರುಣ್ಯ ಯೋಜನೆ ಉದ್ಘಾಟನೆ ಮತ್ತು ಸಂಜೆ 5:50ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





