Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.1-3: ಪಣಂಬೂರು ಬೀಚ್‌ನಲ್ಲಿ ‘ಜಾನಪದ...

ಮಾ.1-3: ಪಣಂಬೂರು ಬೀಚ್‌ನಲ್ಲಿ ‘ಜಾನಪದ ಕಡಲೋತ್ಸವ’

ವಾರ್ತಾಭಾರತಿವಾರ್ತಾಭಾರತಿ26 Feb 2024 7:46 PM IST
share
ಮಾ.1-3: ಪಣಂಬೂರು ಬೀಚ್‌ನಲ್ಲಿ ‘ಜಾನಪದ ಕಡಲೋತ್ಸವ’

ಮಂಗಳೂರು: ಕರ್ನಾಟಕ ಜಾನಪದ ಪರಿಷತ್ ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಸಾರಥ್ಯದಲ್ಲಿ ರೋಹನ್ ಕಾರ್ಪೊರೇಶನ್ ಸಹಯೋಗದಲ್ಲಿ ಮಾ.1ರಿಂದ 3ರವರೆಗೆ ಪಣಂಬೂರು ಬೀಚ್‌ನಲ್ಲಿ ಆಹಾರ ಮೇಳ, ಅಮ್ಯೂಸ್‌ಮೆಂಟ್ ಆಟಗಳು, ಗಾಳಿಪಟ ಉತ್ಸವಗಳೊಂದಿಗೆ ‘ಜಾನಪದ ಕಡಲೋತ್ಸವ’ ಆಯೋಜಿಸಲಾಗಿದೆ ಎಂದು ಜಾನಪದ ಪರಿಷತ್ ಜಿಲ್ಲಾ ಘಟಕದ ಸಂಚಾಲಕ ರಾಜೇಶ್ ಆಳ್ವ ಸೋಮವಾರ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾ.1ರಂದು ಸಂಜೆ 6:30ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಜಾನಪದ ಕಡಲೋತ್ಸವ ಉದ್ಘಾಟಿಸಲಿದ್ದಾರೆ ಎಂದರು.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿವಿಧ ಪ್ರದರ್ಶನ ಉದ್ಘಾಟಿಸುವರು.ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿರುವರು. ಇದೇ ವೇಳೆ ಜಾನಪದ ಕಡಲೋತ್ಸವ ಪ್ರಶಸ್ತಿ ಮತ್ತು 13ಮಂದಿ ಜಾನಪದ ಕಲಾವಿದರಿಗೆ ಗೌರವಾರ್ಪಣೆ ನಡೆಯಲಿದೆ. ರಾತ್ರಿ 7.30ರಿಂದ ಡಾ. ರಮೇಶ್ಚಂದ್ರ ಹಾಗೂ ಕಲಾವತಿ ದಯಾನಂದ ಬಳಗದಿಂದ ಜಾನಪದ ರಸ ಸಂಜೆ ಕಾರ್ಯಕ್ರಮ ಜರಗಲಿದೆ.

ಮಾ.2ರಂದು ಸಂಜೆ 5:30ರಿಂದ ವಿಚಾರ ಸಂಕೀರ್ಣ ಮತ್ತು ಜಾನಪದ ಪರಿಷತ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದೆ. ಶಾಸಕ ಅಶೋಕ್ ಕುಮಾರ್ ರೈ, ಕಜಾಪ ಬೆಂಗಳೂರು ಆಡಳಿತಾಧಿಕಾರಿ ನಂದಕುಮಾರ್ ಹೆಗ್ಡೆ ಭಾಗವಹಿಸಲಿದ್ದಾರೆ.

ಜಾನಪದ ವಿದ್ವಾಂಸ ಡಾ. ಚಿನ್ನಪ್ಪ ಗೌಡ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ಡಾ. ಸಾಯಿಗೀತಾ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್, ಮೈಮ್ ರಾಮ್‌ದಾಸ್ ವಿಷಯ ಮಂಡಿಸಲಿದ್ದಾರೆ.

ಸಂಜೆ 7.30ಕ್ಕೆ ಅಜಯ್ ವಾರಿಯರ್ ತಂಡದಿಂದ ಸಂಗೀತ ರಸ ಸಂಜೆ ನಡೆಯಲಿದೆ. ಮಾ.3ರಂದು ಸಂಜೆ 3ಕ್ಕೆ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಗಾಳಿಪಟ ಉತ್ಸವ ಉದ್ಘಾಟಿಸುವರು.

5.30ಕ್ಕೆ ಸಮಾರೋಪ ಸಮಾರಂಭದಲ್ಲಿ ಅಯೋಧ್ಯೆಯ ಬಾಲ ರಾಮನ ವಿಗ್ರಹ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ‘ಅಮರ ಶಿಲ್ಪಿ’ ಬಿರುದು ಪ್ರದಾನ ಮಾಡಲಾಗುತ್ತದೆ. ಬಳಿಕ ಮಣಿಕಾಂತ್ ಕದ್ರಿ ಬಳಗದವರಿಂದ ಮ್ಯೂಸಿಕಲ್ ನೈಟ್ ನಡಯಲಿದೆ ಎಂದರು.

ಸ್ದಿಗೋಷ್ಠಿಯಲ್ಲಿ ಘಟಕದ ಉಪಾಧ್ಯಕ್ಷ ಮೋಹನ್ ದಾಸ್ ರೈ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್, ಕೋಶಾಧಿಕಾರಿ ತಾರಾನಾಥ ಶೆಟ್ಟಿ ಬೋಳಾರ್, ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿದ್ದರು.

ಏಳು ಮಂದಿಗೆ ಜಾನಪದ ಕಡಲೋತ್ಸವ ಗೌರವ ಪ್ರಶಸ್ತಿ

ಮಾರ್ಚ್ 1 ರಿಂದ 3ರವರೆಗೆ ಪಣಂಬೂರು ಬೀಚಿನಲ್ಲಿ ನಡೆಯುವ ನಡೆಯುವ ಜಾನಪದ ಕಡಲು ಉತ್ಸವ ಕಾರ್ಯಕ್ರಮ ದಲ್ಲಿ ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಅಧಾನಿ ಗ್ರೂಪ್ನ ಅಧ್ಯಕ್ಷ ಕಿಶೋರ್ ಆಳ್ವ, ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬೈ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ, ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ರೋಹನ್ ಮೊಂತೆರೋ, ದಿವ್ಯರೂಪ ಕನ್‌ಸ್ಟ್ರಕ್ಷನ್ ಮಾಲಕ ಯಾದವ ಕೋಟ್ಯಾನ್ ಪೆರ್ಮುದೆ. ದೈವ ನರ್ತಕ ಮುಖೇಶ್ ಗಂಧಕಾಡ್ ಜಾನಪದ ಕಡಲು ಉತ್ಸವ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಡಲೋತ್ಸವದಲ್ಲಿ ಇವರಿಗೆ ಪ್ರಶಸ್ತಿ ಪ್ರಧಾನ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X