ಜ.10ರಂದು ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ

ಮಂಗಳೂರು, ಜ.8: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರದ ಉದ್ಘಾಟನೆ ಹಾಗೂ ’ನೂತನ ಶಿಕ್ಷಣ ನೀತಿಯ ಬಿಕ್ಕಟ್ಟುಗಳು’ ಎಂಬ ವಿಷಯದ ಮೇಲೆ ವಿಚಾರ ಸಂಕಿರಣವು ಜ.10ರಂದು ಅಪರಾಹ್ನ 2:30ಕ್ಕೆ ನಗರದ ಹೋಟೆಲ್ ಶ್ರೀನಿವಾಸ್ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿ ಎಂ.ಎ.ಖಾನ್ ಟ್ರಸ್ಟ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಣಿ ವಿಚಾರ ಮಂಡಿಸಲಿದ್ದಾರೆ. ಟ್ರಸ್ಟ್ ಗೌರವಾಧ್ಯಕ್ಷ ಬಿ.ಎಂ. ಹನೀಫ್ ಪ್ರ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್, ಅಲ್ ಮುಝೈನ್ ಗ್ರೂಪ್ ಚೇರ್ಮ್ಯಾನ್ ಝಕರಿಯಾ ಜೋಕಟ್ಟೆ, ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಲೀಗಲ್ ರಿಸರ್ಚ್ ಆಂಡ್ ಜಸ್ಟೀಸ್ ಟ್ರಸ್ಟ್ ಅಧ್ಯಕ್ಷ ಬಿ.ಇಬ್ರಾಹೀಂ, ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.







