Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂಸಿಸಿ ಬ್ಯಾಂಕಿಗೆ 10.38 ಕೋಟಿ ರೂ....

ಎಂಸಿಸಿ ಬ್ಯಾಂಕಿಗೆ 10.38 ಕೋಟಿ ರೂ. ನಿವ್ವಳ ಲಾಭ; ಶೇ. 10 ಡಿವಿಡೆಂಡ್ ಘೋಷಣೆ

105ನೇ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ25 Sept 2023 11:09 PM IST
share
ಎಂಸಿಸಿ ಬ್ಯಾಂಕಿಗೆ 10.38 ಕೋಟಿ ರೂ. ನಿವ್ವಳ ಲಾಭ; ಶೇ. 10 ಡಿವಿಡೆಂಡ್ ಘೋಷಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ಎಂದು ಪ್ರಖ್ಯಾತವಾಗಿರುವ ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ್ದು, 2022-23ನೇ ವಿತ್ತೀಯ ವರ್ಷದಲ್ಲಿ ಬ್ಯಾಂಕ್ 10.38 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಗರಿಷ್ಠ ಲಾಭವಾಗಿದೆ ಎಂದು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಹೇಳಿದರು.

ಮಂಗಳೂರಿನ ಸಂತ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ(ಲೊಯೊಲಾ ಹಾಲ್) ರವಿವಾರ ನಡೆದ ಬ್ಯಾಂಕಿನ 105ನೇ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶೇ. 10ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದು ಪ್ರಕಟಿಸಿದರು.

ಎಂಸಿಸಿ ಬ್ಯಾಂಕ್ ಒಟ್ಟು ಠೇವಣಿಯಲ್ಲಿ ಶೇ. 8.62 ಪ್ರಗತಿ ಸಾಧಿಸಿದ್ದು, ರೂ.577.95 ಕೋಟಿ ಠೇವಣಿ, ಒಟ್ಟು ಮುಂಗಡ ದಲ್ಲಿ ಶೇ. 8.14 ಪ್ರಗತಿ ಸಾಧಿಸಿದ್ದು ರೂ.355.30 ಕೋಟಿ ರೂ. ಮುಂಗಡಗಳು, ದುಡಿಯುವ ಬಂಡವಾಳ ರೂ.684.31 ಕೋಟಿ (ಪ್ರಗತಿ ಶೇಕಡಾ 11.26) ಮತ್ತು ಶೇರು ಬಂಡವಾಳ ರೂ.27.36 ಕೋಟಿ (ಪ್ರಗತಿ ಶೇಕಡಾ 48.45) ಆಗಿದೆ ಎಂದರು.

ಜೊತೆಗೆ ಬ್ಯಾಂಕಿನ ಎನ್‌ಪಿಎ ಪ್ರಮಾಣವು ಕಳೆದ ಆರ್ಥಿಕ ವರ್ಷದಲ್ಲಿದ್ದ ಶೇ 1.62 ರಿಂದ ಶೇ 1.37 ತಲುಪಿರುವುದು ಬ್ಯಾಂಕಿನ ಬೆಳವಣಿಗೆ ಉತ್ತಮವಾಗಿದೆ ಎಂಬುದನ್ನು ತೋರಿಸುತ್ತದೆ. ಬ್ಯಾಂಕಿನ ಅನುತ್ಪಾದಕ ಸಾಲಕ್ಕೆ ಒದಗಿಸಿದ ಅವಕಾಶದ ಅನುಪಾತವು ಶೇ 78.87 ಆಗಿರುತ್ತದೆ ಎಂದರು.

ಬ್ಯಾಂಕಿನ ಸಿಬಿಎಸ್ ಸಾಫ್ಟ್‌ವೇರ್‌ನ ಉನ್ನತೀಕರಣ, ಡಿಜಿಟಲೀಕರಣ, ಪ್ರತ್ಯೇಕ ಭೂಕಂಪನ ವಲಯದಲ್ಲಿ ಡಿ.ಆರ್ ಕೇಂದ್ರದ ಸ್ಥಾಪನೆ,ಉತ್ಕೃಷ್ಟ ಗ್ರಾಹಕ ಸೇವೆ ನೀಡುವ ನಿಟ್ಟಿನಲ್ಲಿ ಶಾಖೆಗಳ ನವೀಕರಣ, ಗ್ರಾಹಕ ಸಂಪರ್ಕ ಸಭೆ, ಆಶೋಕನಗರ ಶಾಖೆಯ ಸ್ಥಳಾಂತರ, ಬ್ಯಾಂಕಿನ ಸೇವೆಗಳನ್ನು ಇನ್ನೂ ಐದು ಜಿಲ್ಲೆಗಳಲ್ಲಿ ವಿಸ್ತರಣೆ, ಶೇಕಡಾ 8.75 ಬಡ್ಡಿ ದರದಲ್ಲಿ ಶಿಕ್ಷಣ ಸಾಲ, ಇತ್ಯಾದಿ ಗ್ರಾಹಕರ ಸಹಕಾರದಿಂದಾಗಿ ಶೇಕಡಾ 90ರಷ್ಟು ಸಿಕೆವೈಸಿ ನೋಂದಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ 104ನೇ ವಾರ್ಷಿಕ ಸಾಮಾನ್ಯ ಸಭೆಯ ವರದಿಗಳನ್ನು ವಾಚಿಸಿದರು.

ಬ್ಯಾಂಕ್ ಅಫ್ ಮಹಾರಾಷ್ಟ್ರದ ಮಾಜಿ ಅಧ್ಯಕ್ಷ ಅಲನ್ ಸಿ. ಪಿರೇರಾ ಮತ್ತು ಕರ್ಣಾಟಕ ಬ್ಯಾಂಕ್‌ನ ಮಾಜಿ ಹಿರಿಯ ಪ್ರಬಂಧಕ ಸೆಲೆಸ್ಟಿನ್ ಲೀನಾ ಮೊಂತೇರೊ ಹೆಚ್‌ಡಿಎಫ್‌ಸಿ ಬ್ಯಾಂಕಿನ ಮಾಜಿ ಸೀನಿಯರ್ ಎಕ್ಸಿಕ್ಯೂಟಿವ್ ಮಾರ್ಜೊರಿ ಟೆಕ್ಷೆರಾ ಇವರನ್ನು ಗೌರವಿಸಲಾಯಿತು.

ನಿರ್ದೇಶಕರಾದ ಅಂಡ್ರ್ಯೂ ಡಿಸೋಜ, ಜೋಸೆಫ್ ಎಮ್. ಅನಿಲ್ ಪತ್ರಾವೊ, ಡಾ. ಜೆರಾಲ್ಡ್ ಪಿಂಟೊ, ಡೇವಿಡ್ ಡಿಸೋಜ, ಎಲ್ ರೊಯ್ ಕಿರಣ್ ಕ್ರಾಸ್ಟೊ, ರೋಶನ್ ಡಿ’ಸೋಜ, ಹೆರಾಲ್ಡ್ ಮೊಂತೇರೊ, ಜೆ. ಪಿ. ರೊಡ್ರಿಗಸ್, ವಿನ್ಸೆಂಟ್ ಲಸ್ರಾದೊ, ಮೆಲ್ವಿನ್ ವಾಸ್, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜ, ವೃತ್ತಿಪರ ನಿರ್ದೇಶಕ ಸಿ.ಜಿ. ಪಿಂಟೊ, ಸುಸಾಂತ್ ಸಲ್ಡಾನ್ಹಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್, ಉಪ ಮಹಾಪ್ರಬಂಧಕ ರಾಜ್ ಎಫ್. ಮಿನೇಜಸ್ ಉಪಸ್ಥಿತರಿದ್ದರು.

ಮಹಾಪ್ರಬಂಧಕ ಸುನಿಲ್ ಮಿನೇಜಸ್ ಸ್ವಾಗತಿಸಿ, ಕಿರಿಯ ಸಹಾಯಕ ಆಲ್ಡ್ರಿನ್ ಡಿಸೋಜ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X