ಸೆ.11ರಂದು ಯೇನೆಪೊಯ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರ

ಮಂಗಳೂರು : ನಗರದ ಕೂಳೂರಿನ ಯೇನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ , ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಇದರ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ಸೆ.11 ರಂದು ಬೆಳಗ್ಗೆ 9.30ಕ್ಕೆ ಸಂಸ್ಥೆಯ ಸೆಮಿನಾರ್ ಹಾಲ್‌ನಲ್ಲಿ ಯೂತ್ ರೆಡ್ ಕ್ರಾಸ್ ಓರಿಯೆಂಟೇಶನ್ ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ನಡೆಯಲಿದೆ.
ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪಿ.ಬಿ.ಹರೀಶ್ ರೈ, ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ನಿತ್ಯಶ್ರೀ.ಬಿ.ವಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಪ್ರಾಂಶುಪಾಲ ಪ್ರೊ.ಜೀವನ್ ರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಯೇನೆಪೊಯ ನರ್ಸಿಂಗ್ ಕಾಲೇಜಿನ ಯೂತ್ ರೆಡ್ ಕ್ರಾಸ್ ಅಧಿಕಾರಿ ಜ್ಯೋತಿ, ಯೇನೆಪೊಯ ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ನ ಅಸಿಸ್ಟೆಂಟ್ ಪ್ರೊ. ವಿಕ್ಕಿ ಜೋಸ್ವಿಟ ಡಿಸೋಜ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





