ಜ.11ರಂದು ಸುಧೀಂದ್ರ ತೀರ್ಥ ಸ್ವಾಮೀಜಿಯ ಜನ್ಮಶತಾಬ್ದಿ ಮಂಗಳೋತ್ಸವ

ಮಂಗಳೂರು, ಜ,8: ಸುಧೀಂದ್ರ ತೀರ್ಥ ಸ್ವಾಮೀಜಿಯ ಜನ್ಮ ಶತಾಬ್ದಿಯ ಮಂಗಳೋತ್ಸವ ಕಾರ್ಯಕ್ರಮವು ಕಾಶೀಮಠಾಧೀಶ ಸಂಯಮೀಂದ್ರ ತೀರ್ಥ ಸ್ವಾಮೀಜಿಯ ಉಪಸ್ಥಿತಿಯಲ್ಲಿ ಜ.11ರಂದು ಮಂಗಳೂರು ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸುಧೀಂದ್ರ ತೀರ್ಥ ಸ್ವಾಮೀಜಿಯ ಜನ್ಮ ಶತಮಾನೋತ್ಸವವನ್ನು ಆದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಅಪರಾಹ್ನ 3:30ಕ್ಕೆ ಶ್ರೀ ಕಾಶೀಮಠ ಸಂಸ್ಥಾನದ ಕೊಂಚಾಡಿಯಲ್ಲಿರುವ ಶಾಖಾಮಠಕ್ಕೆ ಭಕ್ತರು ಆಗಮಿಸಿ ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಪಾದುಕಾ ಯಾತ್ರೆ ನಡೆಯಲಿದೆ ರಾತ್ರಿ 8:30ಕ್ಕೆ ಮಂಗಳೋತ್ಸವದ ಸಭಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ವೇದವ್ಯಾಸ ಕಾಮತ್, ದೇವಸ್ಥಾನದ ಮೊಕ್ತೇಸರ ಸಿಎ ಜಗನ್ನಾಥ್ ಕಾಮತ್, ಪ್ರಮುಖರಾದ ಕೋಟೇಶ್ವರ ದಿನೇಶ್ ಕಾಮತ್, ವಾಸುದೇವ್ ಕಾಮತ್, ರಘುವೀರ್ ಭಂಡಾರಕಾರ್, ಟಿ. ಗಣಪತಿ ಪೈ, ಪ್ರಶಾಂತ್ ಪೈ ಉಪಸ್ಥಿತರಿದ್ದರು.





