12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ಅ.21: ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳ ಪೊಲೀಸ್ ಠಾಣಾ 2014ರಲ್ಲಿ ದಾಖಲಿಸಿ ಕೊಂಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕಾಸರಗೋಡ್‌ನ ಚಂದ್ರಶೇಖರನ್ (54) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೆನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
12 ವರ್ಷ ಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೆ.ಚಂದ್ರ ಶೇಖರನ್‌ನನ್ನು ಅ.21ರಂದು ಕಾಸರಗೋಡಿನ ನುಳ್ಳಿಪ್ಪಾಡಿಯಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿ ಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story





