ಜು.13: ದ.ಕ. ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡಿಸಿ ವಾಮಂಜೂರಿನಲ್ಲಿ ಪ್ರತಿಭಟನೆ

ಮಂಗಳೂರು, ಜು.7: ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಕೆತ್ತಿಕಲ್ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಗುಡ್ಡ ಕೊರೆದು ಕಾಮಗಾರಿ ನಡೆಸಿರುವುದರಿಂದ ಸುತ್ತಲ ಪ್ರದೇಶದ ಜನರು ಸದಾ ಭಯದ ವಾತಾವರಣದಲ್ಲಿ ಬದುಕವಂತಾಗಿದೆ. ಇದಕ್ಕೆ ಕಾರಣವಾಗಿರುವ ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡಿಸಿ ಜು.13ರಂದು 8:30ಕ್ಕೆ ಡಿವೈಎಫ್‌ಐ ವಾಮಂಜೂರು ಪ್ರದೇಶ ಸಮಿತಿಯ ವತಿಯಿಂದ ವಾಮಂಜೂರು ಜಂಕ್ಷನ್‌ನಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





