ಅ.13: ಸುವರ್ಣ ಮಹೋತ್ಸವ ಕಾರ್ಯಕ್ರಮ
ಮಂಗಳೂರು, ಅ.10: ದ.ಕ.ಹಾಗೂ ಉಡುಪಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಮಂಗಳೂರು ಹಾಗೂ ಉಡುಪಿ ಇದರ ಸಹಯೋಗದೊಂದಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವಷರ್ಗಳಾದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮವು ಅ.13ರಂದು ಬೆಳಗ್ಗೆ 10ಕ್ಕೆ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್‌ನಲ್ಲಿ ನಡೆಯಲಿದೆ.
ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್ ಭಾಗವಹಿಸಲಿದ್ದಾರೆ. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





