Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.14ರಂದು ಎನ್‌ಇಪಿ ರದ್ದುಗೊಳಿಸದಿರಲು...

ಸೆ.14ರಂದು ಎನ್‌ಇಪಿ ರದ್ದುಗೊಳಿಸದಿರಲು ಆಗ್ರಹಿಸಿ ತಜ್ಞರ ಸಭೆ

ವಾರ್ತಾಭಾರತಿವಾರ್ತಾಭಾರತಿ12 Sept 2023 3:56 PM IST
share
ಸೆ.14ರಂದು ಎನ್‌ಇಪಿ ರದ್ದುಗೊಳಿಸದಿರಲು ಆಗ್ರಹಿಸಿ ತಜ್ಞರ ಸಭೆ

ಮಂಗಳೂರು, ಸೆ.12: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ರದ್ದುಗೊಳಿಸದಿರಲು ಆಗ್ರಹಿಸಿ ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಶನ್ ಸಂಸ್ಥೆ ವತಿಯಿಂದ ಸೆ.14ರಂದು ಸಂಜೆ 4ಕ್ಕೆ ನಗರದ ಡೊಂಗರಕೇರಿ ಕೆನರಾ ಹೈಸ್ಕೂಲ್ ಭುವನೇಂದ್ರ ಸಭಾಭವನದಲ್ಲಿ ಶಿಕ್ಷಣ ತಜ್ಞರ ಸಭೆ ಆಯೋಜಿಸಲಾಗಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಶನ್ ಸಂಚಾಲಕರಾದ ಮಂಗಳೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ರಮೇಶ ಕೆ. ಅವರು, ಸರಕಾರ ಕೇವಲ ತನ್ನ ಪ್ರತಿಷ್ಠೆಗಾಗಿ ಎನ್‌ಇಪಿಯನ್ನು ರದ್ದುಪಡಿಸಲು ಹೊರಟಿದೆ. ಶಿಕ್ಷಣ ವಿರೋಧಿ, ವಿದ್ಯಾರ್ಥಿ ವಿರೋಧಿ ಸರಕಾರದ ವಿರುದ್ಧ ಶಿಕ್ಷಣ ತಜ್ಞರ ಸಭೆ ನಡೆಸುವ ಮೂಲಕ ಎಚ್ಚರಿಸಲಿದ್ದೇವೆ. ಸಭೆಗೆ ಮುಖ್ಯ ವಕ್ತಾರರಾಗಿ ಬೆಂಗಳೂರಿನ ಹಿರಿಯ ಪತ್ರಕರ್ತ ರವೀಂದ್ರ ರೇಷ್ಮೆ, ವಿಟಿಯು ಬೆಳಗಾವಿಯ ವಿಶ್ರಾಂತ ಕುಲಪತಿ ಪ್ರೊ. ಕರಿಸಿದ್ದಪ್ಪ, ಸೆಸ್ ಬೆಂಗಳೂರಿನ ನಿರ್ದೇಶಕ ಗೌರೀಶ ಆಗಮಿಸಲಿದ್ದಾರೆ. ಶಿಕ್ಷಣ ತಜ್ಞರ ಅಭಿಪ್ರಾಯವನ್ನು ಅಲಿಸಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ನಳಿನ್‌ಕುಮಾರ್ ಕಟೀಲು, ಮಾಜಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾಗವಹಿಸುವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಾಲಿ ಮತ್ತು ಮಾಜಿ ಶಾಸಕರು, ವಿಶ್ರಾಂತ ಕುಲಪತಿಗಳು, ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್‌ನ ಹಾಲಿ, ಮಾಜಿ ಸದಸ್ಯರು, ಶಿಕ್ಷಣ ತಜ್ಞರು, ಪ್ರಾಂಶುಪಾಲರು, ಪ್ರಾಧ್ಯಾಪಕರು, ಉಪನ್ಯಾಸಕರು, ಮುಖ್ಯೋಪಾಧ್ಯಾಯರು, ಶಿಕ್ಷಕರು, ಆಡಳಿತ ಮಂಡಳಿ, ಬರಹಗಾರರು, ಪತ್ರಕರ್ತರು, ಅಂಕಣಗಾರರು, ಸಾಹಿತಿಗಳು ಮತ್ತು ಚಿಂತಕರು ಭಾಗವಹಿಸಬೇಕಾಗಿ ವಿನಂತಿಸುತ್ತಿದ್ದೇವೆ ಎಂದರು.

ಕೇಂದ್ರ ಸರಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಿದ್ದು, ಪ್ರಶಂಸಾರ್ಹವಾಗಿದೆ. ಇಡೀ ದೇಶದಲ್ಲಿ ಕರ್ನಾಟಕ ಎನ್‌ಇಪಿ ಮೊದಲ ಬಾರಿಗೆ 2020-21ರಲ್ಲಿ ಜಾರಿಗೊಳಿಸಿದ ರಾಜ್ಯವಾಗಿದೆ. ಹೊಸ ಶಿಕ್ಷಣ ನೀತಿ ಜಾರಿಯಾಗುತ್ತಿರುವ ಹಂತದಲ್ಲಿಯೇ ರದ್ದುಗೊಳಿಸಲು ಹೊರಟಿರುವುದು ರಾಜಕೀಯ ಪ್ರೇರಿತವಾದುದು. ಎನ್‌ಇಪಿಯನ್ನು ರದ್ದುಗೊಳಿಸುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡಿದರೆ ಸಮಸ್ತ ವಿದ್ಯಾರ್ಥಿ ಸಮುದಾಯ ಹಾಗೂ ಶಿಕ್ಷಣಾಸಕ್ತ ಜನಸಮುದಾಯ ಬಲವಾಗಿ ಪ್ರತಿಭಟಿಸಬೇಕೆಂದು ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ, ಮಂಗಳೂರು ಶಾಖೆ ಕರೆ ನೀಡುತ್ತದೆ ಎಂದರು.

ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಹೆಚ್ಚುವರಿ ನಿರ್ದೇಶಕ ಪ್ರೊ. ರಾಜಶೇಖರ್ ಹೆಬ್ಬಾರ್, ಮಂಗಳೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ರವಿಚಂದ್ರ ಪಿ.ಎಂ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X