Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜು.14ಕ್ಕೆ ಫಾದರ್ ಮುಲ್ಲರ್ ಹೋಮಿಯೋಪಥಿ...

ಜು.14ಕ್ಕೆ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ರೂಬಿ ಮಹೋತ್ಸವ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ11 July 2025 12:42 PM IST
share
ಜು.14ಕ್ಕೆ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ರೂಬಿ ಮಹೋತ್ಸವ ಸಮಾರೋಪ

ಕೊಣಾಜೆ: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಅಂಗ ಸಂಸ್ಥೆಯಾದ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ತನ್ನ 40 ವರ್ಷಗಳ ಆರೋಗ್ಯ ಸೇವೆಯ ರೂಬಿ ಮಹೋತ್ಸವ (Ruby Jubilee) ಆಚರಣೆಯ ಸಮಾರೋಪವನ್ನು ಜು.14ರಂದು ಸಂಜೆ 5ರಿಂದ ರಾತ್ರಿ 10 ರವರೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್ ನಲ್ಲಿ ಆಚರಿಸಲಿದೆ ಎಂದು ನಿರ್ದೇಶಕ ರೆ.ಫಾ ಫೌಸ್ಪಿನ್ ಲ್ಯೂಕಾಸ್ ಲೋಬೊ ಹೇಳಿದ್ದಾರೆ.

ಅವರು ದೇರಳಕಟ್ಟೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗ ಮಾಹಿತಿ ನೀಡುತ್ತಾ, ಬೆಳಗ್ಗೆ 7:30ಕ್ಕೆ ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಧರ್ಮಾಧಿಕಾರಿ ಹಾಗೂ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಅಧ್ಯಕ್ಷ ರೆ.ಫಾ.ಡಾ.ಪೀಟರ್ ಪೌಲ್ ಸಲ್ಡಾನ ಅವರು ದೇರಳಕಟ್ಟೆಯ 'ಅವರ್ ಲೇಡಿ ಆಫ್ ಲೂರ್ಡ್ಸ್ ಚಾಪೆಲ್' ಕೃತಜ್ಞತಾ ಬಲಿಪೂಜೆ ಅರ್ಪಿಸಲಿದ್ದಾರೆ.

ಸಂಜೆ ನಡೆಯುವ ರೂಬಿ ಮಹೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು ಕ್ರೈಸ್ತ ಧರ್ಮಪ್ರಾಂತದ ಧರ್ಮಾಧಿಕಾರಿ ರೆ.ಫಾ.ಡಾ.ಬರ್ನಾರ್ಡ್ ಮೊರಾಸ್ ಮತ್ತು ಮುಂಬೈಯಪಾಲ್ಸರ್ ನ ಡಾ.ಎಂ.ಎಲ್.ಧಾವಲೆ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಎಂ.ಧಾವಲೆ ಹಾಗೂ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ಮಾಜಿ ನಿರ್ದೇಶಕ ರೆ.ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ಮಾಜಿ ನಿರ್ದೇಶಕರುಗಳು, ಆಡಳಿತಾಧಿಕಾರಿಗಳು, ಸಹಾಯಕ ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ವೈದ್ಯಕೀಯ ಅಧೀಕ್ಷಕರೊಂದಿಗೆ, 25 ವರ್ಷಗಳಿಗೂ ಹೆಚ್ಚು ಕಾಲ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಅಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿಯನ್ನು ಇದೇವೇಳೆ ಸನ್ಮಾನಿಸಲಾಗುವುದು ಎಂದರು.

ರೂಬಿ ಜುಬಿಲಿ ವಿದ್ಯಾರ್ಥಿ ಕಲ್ಯಾಣ ವಿದ್ಯಾರ್ಥಿ ವೇತನ:

ಫಾದರ್ ಮುಲ್ಲರ್ ಹೋಮಿಯೋಪಥಿ ಮಡಿಕಲ್ ಕಾಲೇಜಿನ ಪೋಷಕರು-ಶಿಕ್ಷಕರು-ವಿದ್ಯಾರ್ಥಿಗಳ ಸಂಘ (PTSA) ಮುಂದಾಳತ್ವದಲ್ಲಿ ರೂಬಿ ಜುಬಿಲಿಯ ಅಂಗವಾಗಿ ರೂಬಿ ಜುಬಿಲಿ ವಿದ್ಯಾರ್ಥಿ ಕಲ್ಯಾಣ ವಿದ್ಯಾರ್ಥಿ ವೇತನವನ್ನು ಈ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಹಾಗೂ ಯೋಗ್ಯ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿ ಗುರಿಗಳನ್ನು ಸಾಧಿಸಲು ಬೆಂಬಲ ನೀಡಲು ಉದ್ದೇಶಿಸಿದೆ ಎಂದರು.

ಜು.14ರಂದು ಸಮಾರಂಭದ ಸಮಾರೋಪವು ಬಹುಮಾನ ವಿತರಣೆಯೊಂದಿಗೆ ನಡೆಯಲಿದ್ದು, ಅತ್ಯುತ್ತಮ ವಿದ್ಯಾರ್ಥಿ ಸಂಶೋಧಕನಿಗೆ ಮುಲ್ಲರ್ ಯುವ ಸಂಶೋಧಕ ಪ್ರಶಸ್ತಿ, ಅತ್ಯುತ್ತಮ ಸ್ನಾತಕೋತ್ತರ ಸಂಶೋಧಕನಿಗೆ ಮುಲ್ಲರ್ ಅತ್ಯುತ್ತಮ ಸಂಶೋಧಕ ಪ್ರಶಸ್ತಿ ಮತ್ತು ಅತ್ಯುತ್ತಮ ಅಧ್ಯಾಪಕ ಸಂಶೋಧಕನಿಗೆ ಮುಲ್ಲರ್ ಸಂಶೋಧಕ ಪ್ರಶಸ್ತಿ - ವರ್ಷದ ವಿಜೇತೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಾದರ್ ಮುಲ್ಲರ್ ವೈದ್ಯಕೀಯ ಸಂಸ್ಥೆಗಳ ನಿರ್ದೇಶಕ ಫಾ.ಥಾ. ಫೌಸ್ಟಿನ್ ಲೂಕಾಸ್ ಲೋಬೊ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಫಾ.ಅಜಿತ್ ಮೆನೇಝಸ್ ಪಾಲ್ಗೊಳ್ಳಲಿದ್ದಾರೆ.

ಡಾ.ಎಂ.ಎಲ್.ಧಾವಲೆ, ಮೆಮೋರಿಯಲ್ ಹೋಮಿಯೋಪಥಿಕ್ ಇನ್ ಸ್ಟಿಟ್ಯೂಟ್, ಪಾಲ್ವರ್, ಮುಂಬೈ ಗೌರವ ಅತಿಥಿಯಾಗಿ, ಹಾಗೂ ಡಾ ಆನಂದ್ ಕಪ್ಪೆ, ನಿರ್ದೇಶಕರು, ಡಾ. ಎಂ. ಎಲ್. ಧಾವಲೆ ಮೆಮೋರಿಯಲ್ ಟ್ರಸ್ಟ್ ಆಸ್ಪತ್ರೆ, ಪಾಲ್ವರ್, ಮುಂಬೈ ಅವರು ಮುಖ್ಯ ಭಾಷಣಗಾರರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಫಾ.ಡೊನಾಲ್ಡ್ ನಿಲೇಶ್ ಕ್ರಾಸ್ತಾ, ಫಾದರ್ ಮುಲ್ಲರ್ ಹೋಮಿಯೋಪಥಿ ಫಾರ್ಮಸಿ ವಿಭಾಗದ ಆಡಳಿತಾಧಿಕಾರಿ ಫಾ.ನೆಲ್ಸನ್ ಧೀರಜ್ ಪಾಯಸ್, ಪ್ರಾಂಶುಪಾಲ ಡಾ.ಇ.ಎಸ್. ಜೆ. ಪ್ರಭು ಕಿರಣ್, ರೂಬಿ ಜುಬಿಲಿ ಸಮಾರಂಭದ ಮುಖ್ಯ ಸಂಚಾಲಕಿ ಡಾ.ವಿಲ್ಮಾ ಮೀರಾ ಡಿಸೋಜ, ವೈದ್ಯಕೀಯ ಅಧೀಕ್ಷಕ ಡಾ.ಗಿರೀಶ್ ನವಡಾ ಯು.ಕೆ., ಸಂಚಾಲಕ ಡಾ.ಸ್ಕಂದನ್ ಎಸ್. ಕುಮಾರ್, ಮಾಧ್ಯಮ ಸಮಿತಿಯ ಸಂಚಾಲಕಿ ಡಾ.ಶೆರ್ಲಿನ್ ಪೌಲ್ ಮೊದಲಾದವರು ಉಪಸ್ಥಿತರಿದ್ದರು.

Tags

father mullerfather muller homeopathic medical college hospital
share
ವಾರ್ತಾಭಾರತಿ
ವಾರ್ತಾಭಾರತಿ
Next Story
X