Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜು.14: ಮರಳು ನೀತಿ, ಕೆಂಪು ಕಲ್ಲು...

ಜು.14: ಮರಳು ನೀತಿ, ಕೆಂಪು ಕಲ್ಲು ಪರವಾನಗಿ ನಿಯಮ ಸಡಿಲಿಕೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 July 2025 6:59 PM IST
share
ಜು.14: ಮರಳು ನೀತಿ, ಕೆಂಪು ಕಲ್ಲು ಪರವಾನಗಿ ನಿಯಮ ಸಡಿಲಿಕೆ ಆಗ್ರಹಿಸಿ ಪ್ರತಿಭಟನೆ

ಉಳ್ಳಾಲ: ಕಳೆದೊಂದು ತಿಂಗಳಿಂದ ಜಿಲ್ಲೆಯಲ್ಲಿ ಕೆಂಪುಕಲ್ಲು ಕೋರೆ ಹಾಗೂ ಮರಳು ಸರಬರಾಜು ಸಂಪೂರ್ಣ ಸ್ಥಬ್ಧಗೊಂಡ ಪರಿಣಾಮ, ಜನಸಾಮಾನ್ಯರು, ಕೂಲಿಕಾರ್ಮಿಕರು, ಕಟ್ಟಡ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರಕಾರದ ಕಠಿಣ ನಿಯಮಗಳಿಂದ ಜನಸಾಮಾನ್ಯರು ತೊಂದರೆ ಎದುರಿಸುವಂತಾಗಿದ್ದು, ಈ ಹಿನ್ನೆಲೆಯಲ್ಲಿ ಜು.14ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಬಿಜೆಪಿ ಪ್ರತಿಭಟನೆ ನಡೆಸಲಿದ್ದು, ಅಂದು ಬೆಳಿಗ್ಗೆ 10ಕ್ಕೆ ತೊಕ್ಕೊಟ್ಟು ಪ್ಲೈ ಓವರ್ ಕೆಳಭಾಗದಲ್ಲಿ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ವತಿಯಿಂದ, ಮರಳು ಮತ್ತು ಕೆಂಪುಕಲ್ಲು ವಿಚಾರದಲ್ಲಿ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಜನಾಕ್ರೋಶ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಹೇಳಿದರು.

ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ಬಲ್ಲಿ ಶನಿವಾರದಂದು ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷವು ಸರಳ ಮರಳು ನೀತಿಯನ್ನು ಜಾರಿಗೊಳಿ ಸುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿದ್ದರೂ ಅದನ್ನು ಈ ವರೆಗೂ ಈಡೇರಿಸಿಲ್ಲ. ಜಿಲ್ಲೆಯಲ್ಲಿ ಘಟಾನು ಗಟಿ ರಾಜಕೀಯ ನಾಯಕರಿದ್ದರೂ ಮರಳು ಮತ್ತು ಕೆಂಪು ಕಲ್ಲಿನ ಸಮಸ್ಯೆಯನ್ನು ಕಾನೂನು ರೀತಿ ಪರಿಹರಿಸದ್ದು ದುರದೃಷ್ಟ.ಕೆಂಪು ಇಟ್ಟಿಗೆ ಕಲ್ಲು ತೆಗೆಯುವ ಉದ್ಯಮಿಗೆ ಪಂಚಾಯತ್ ಮಟ್ಟದಲ್ಲಿ ಪರವಾ ನಿಗೆ ಸಿಗುವಂತ ನಿಟ್ಟಿನಲ್ಲಿ ನಿಬಂಧನೆಗಳನ್ನು ಸರಳೀಕರಣಗೊಳಿಸಬೇಕಿದೆ. ಇದರಿಂದ ರಾಜಧನ ಸಂಗ್ರಹದ ಮೂಲಕ ಸರಕಾರಕ್ಕೆ ದೊಡ್ಡ ಮೊತ್ತದ ಆದಾಯ ಬರುತ್ತದೆ.ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟು ಸೋಮವಾರ ಪ್ರತಿಭಟನೆ ನಡೆಯಲಿದೆ ಎಂದರು.

ಬಿಜೆಪಿ ಮಂಗಳೂರು ಮಂಡಲ ರೈತ ಮೋರ್ಚದ ಪ್ರಧಾನ ಕಾರ್ಯದರ್ಶಿ ರವಿ ರೈ ಪಜೀರು ಮಾತನಾಡಿ ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದಾಗ ಜಿಲ್ಲೆಯಲ್ಲಿ 3ಎ ಅಡಿ 257 ಕೆಂಪು ಕಲ್ಲಿನ ಪರವಾನಿಗೆ ಇತ್ತು.ಈಗ ಊರ್ಜಿತವಾಗಿ ಜಿಲ್ಲೆಯಲ್ಲಿ ಕೆಂಪು ಕಲ್ಲಿಗೆ ಕೇವಲ ನಾಲ್ಕು ಪರವಾನಿಗೆ ಇದೆ.ಯಾಕೆಂದರೆ ಕಳೆದ 2024 ರಲ್ಲಿ 3ಎ ಪರವಾನಿಗೆಯಲ್ಲಿ ಹೊಸ ನಿಯಾಮವಳಿಯನ್ನ ರಾಜ್ಯ ಸರಕಾರ ತಂದ‌ ಕಾರಣ ಈಗ ಯಾವುದೇ ಪರವಾನಿಗೆ ಆಗುತ್ತಿಲ್ಲ. ಬಿಜೆಪಿ ಸರಕಾರ ಇದ್ದಾಗ 3ಎ ಪರವಾನಿಗೆಗೆ ಒಂದು ಟನ್ ಕೆಂಪು ಮುರ ಇಟ್ಟಿಗೆ ಪೂರೈಕೆಗೆ ಕೇವಲ 72 ರೂಪಾಯಿ ರಾಜಧನ ಸಂದಾಯ ಮಾಡಬೇಕಿತ್ತು.ಈಗ ಒಂದು ಟನ್ಗೆ 2ಡಿ ಒಳಪಟ್ಟು 282 ರೂಪಾಯಿ ರಾಜಧನ ನೀಡಬೇಕಿದೆ.

ನಮ್ಮ ಜಿಲ್ಲೆಯ ಪಕ್ಕದ ಕೇರಳ ರಾಜ್ಯದಲ್ಲಿ ಒಂದು ಟನ್ಗೆ ಕೇವಲ 32 ರೂಪಾಯಿ ರಾಜಧನ ಇದೆ.ಕೇರಳಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಸುಮಾರು ಒಂಭತ್ತು ಪಟ್ಟು ಜಾಸ್ತಿ ರಾಜಧನ ತೆರಬೇಕಿದೆ.ಜಿಲ್ಲೆಗೆ ತಾಗಿ ಕೊಂಡಿರುವ ಕೇರಳದಿಂದ ದಿನಕ್ಕೆ ಸುಮಾರು ಇಪ್ಪತ್ತೈದು ಸಾವಿರಕ್ಕೂ ಅಧಿಕ ಟನ್ ಕೆಂಪು ಮುರ ಇಟ್ಟಿಗೆ ಮಂಗಳೂರಿಗೆ ಆಮದು ಆಗುತ್ತಿದ್ದು,ನಮಗೆ ಇಲ್ಲಿ ಇಷ್ಟೊಂದು ರಾಜಧನ ಕಟ್ಟಿ ಕೇರಳದವರೊಂದಿಗೆ ಪೈಪೋಟಿ ನಡೆಸಿ ವ್ಯವಹಾರ ನಡೆಸಲು ಆಗುತ್ತಿಲ್ಲ.ಜನಸಾಮಾನ್ಯರ ಕಷ್ಟವನ್ನು ಅರಿಯದೆ ರಾಜ್ಯ ಸರಕಾರವು ತೆರಿಗೆ ದುಪ್ಪಟ್ಟು ಏರಿಸಿ ತೊಂದರೆ ನೀಡುತ್ತಿದೆ.ಕಳೆದ ಒಂದು ವರುಷದಿಂದ ಗಣಿ ಇಲಾಖೆ ಸಚಿವರು ಮತ್ತು ಸಂಬಂಧಿಸಿದ ಅಧಿಕಾರಿಗಳಲ್ಲಿ 3ಎ ಪರವಾನಿಗೆಯನ್ನ ಸರಳೀಕರಣಗೊಳಿಸುವಂತೆ ಮನವಿ ಮಾಡುತ್ತಾ ಬಂದಿದ್ದು,ಈ ಬಗ್ಗೆ ರಾಜ್ಯ ಸರಕಾರ ನಿರ್ಲಕ್ಷ ತಾಳಿದೆ.ಪರವಾನಿಗೆ ಇಲ್ಲದೆಯೇ ಕೆಲವರು ಕೆಂಪು ಮುರ ಇಟ್ಟಿಗೆ ವ್ಯವಹಾರ ಮಾಡುತ್ತಿದ್ದರು.ಅಧಿಕಾರಿಗಳು ಇಂತಹ ಅನಧಿಕೃತ ಕೋರೆಗಳ ವಿರುದ್ಧ ಕಟ್ಟುನಿಟ್ಟಿನ‌ ಕ್ರಮ ಕೈಗೊಂಡ ಪರಿಣಾಮ ನಮಗೂ ಇಲ್ಲಿ ತಕ್ಷಣಕ್ಕೆ ಕೆಂಪು ಮುರ ಇಟ್ಟಿಗೆ ಪರವಾನಿಗೆ ಸಿಗದೇ ಇರುವುದರಿಂದ ದುಡಿಯುವ ವರ್ಗದವರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಪ್ರಧಾನ‌ಕಾರ್ಯದರ್ಶಿಗಳಾದ ಮೋಹನ್ ರಾಜ್.ಕೆ.ಆರ್ ,ದಯಾನಂದ ತೊಕ್ಕೊಟ್ಟು,ಮಂಡಲ ಕಾರ್ಯದರ್ಶಿ ರಮೇಶ್ ಬೆದ್ರೋಳಿಕೆ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X