Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.14: ಎಂ.ಎನ್. ರಾಜೇಂದ್ರಕುಮಾ‌ರ್...

ಸೆ.14: ಎಂ.ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ 'ಧರ್ಮ ಜಾಗೃತಿ ಯಾತ್ರೆ

ವಾರ್ತಾಭಾರತಿವಾರ್ತಾಭಾರತಿ12 Sept 2025 10:12 PM IST
share
ಸೆ.14: ಎಂ.ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ ಧರ್ಮ ಜಾಗೃತಿ ಯಾತ್ರೆ

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ಸೆ.14ರಂದು 'ಧರ್ಮ ಜಾಗೃತಿ ಯಾತ್ರೆ'ನಡೆಯಲಿದೆ. ಈ ಯಾತ್ರೆಯಲ್ಲಿ 1500ಕ್ಕೂ ಅಧಿಕ ಸಹಕಾರಿ ಸಂಘಗಳು, 3000ಕ್ಕೂ ಅಧಿಕ ವಾಹನಗಳು ಭಾಗಿಯಾಗಲಿವೆ. ಸೆ.14ರಂದು ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಯಾತ್ರೆ ನಡೆಯಲಿದೆ ಎಂದು ಸಂಘಟಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯವನ್ನು ಹೊಂದಿರುವ ಪವಿತ್ರ ಕ್ಷೇತ್ರ. ಇಂತಹ ಪಾವಿತ್ರ್ಯತೆಯ, ಪೂಜನೀಯ ಕ್ಷೇತ್ರಕ್ಕೆ ಕಳಂಕ ತರುತ್ತಿರುವ ದುಷ್ಟಶಕ್ತಿಗಳ ಷಡ್ಯಂತರವನ್ನು ವಿರೋಧಿಸಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳು ಪಕ್ಷಾತೀತವಾಗಿ ಹಾಗೂ ಜಾತ್ಯತೀತ ವಾಗಿ ಒಗ್ಗಟ್ಟಾಗಿ, 'ಸಹಕಾರ ರತ್ನ' ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ 'ಧರ್ಮ ಜಾಗೃತಿ ಯಾತ್ರೆ'ಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಿಧದ ಸಹಕಾರಿ ಸಂಘಗಳ ಪದಾಧಿಕಾರಿಗಳು, ಸದಸ್ಯರು ಗಳು ಉಜಿರೆಯಲ್ಲಿ ಒಟ್ಟುಸೇರಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ ನಡೆಸಲಿದ್ದಾರೆ. ಇದರಲ್ಲಿ ಸುಮಾರು 1500ಕ್ಕೂ ಅಧಿಕ ಸಹಕಾರಿ ಸಂಘಗಳ 3000ಕ್ಕೂ ಅಧಿಕ ವಾಹನಗಳಲ್ಲಿ ಸಹಕಾರಿ ಗಳು ಧರ್ಮಯಾತ್ರೆ ಮಾಡಲಿದ್ದಾರೆ. ಇದೊಂದು ಧರ್ಮ ಸಂರಕ್ಷಣೆಯ ಯಾತ್ರೆಯಾಗಿದೆ. ಧಾರ್ಮಿಕ ಕ್ಷೇತ್ರಗಳ ವಿರುದ್ಧ ಅಪಪ್ರಚಾರ ಮಾಡುವ ಷಡ್ಯಂತ್ರಿಗಳ ವಿರುದ್ಧ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳು ಯಾವಾಗಲೂ ಸೌಹಾರ್ದತೆಯಿಂದ, ಪರಸ್ಪರ ಸಹಬಾಳ್ವೆಯಿಂದ ಕಾರ್ಯ ನಿರ್ವಹಿಸುತ್ತಿವೆ. ಪವಿತ್ರ ಧರ್ಮಸ್ಥಳ ಕ್ಷೇತ್ರದ ಮೇಲೆ ವಿಶೇಷ ಗೌರವ, ಶ್ರದ್ಧಾ ಭಕ್ತಿಯನ್ನು ಸಹಕಾರ ಕ್ಷೇತ್ರ ಹೊಂದಿದೆ. ಹಾಗಾಗಿ, ಈ ಧರ್ಮ ಕ್ಷೇತ್ರಕ್ಕೆ ಅಪಚಾರವಾಗವೆಸಗುವವರಿಗೆ ಸ್ಪಷ್ಟ ಸಂದೇಶವನ್ನು ನೀಡುವ ಚಾರಿತ್ರಿಕ ಯಾತ್ರೆ ಈ ಧರ್ಮ ಜಾಗೃತಿ ಯಾತ್ರೆ ಆಗಬೇಕಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಸಹಕಾರ ಕ್ಷೇತ್ರಕ್ಕೆ ವಿಶೇಷ ಕೊಡುಗೆ ಲಭಿಸಿದೆ. ಸಹಕಾರ ಕ್ಷೇತ್ರ ಸರ್ವ ಧರ್ಮಕ್ಕೂ ಗೌರವ ನೀಡುವ ಕ್ಷೇತ್ರ ಆಗಿರುವುದರಿಂದ ಸರ್ವ ಧರ್ಮಗಳ ಸಂರಕ್ಷಣೆಯ ದೃಷ್ಟಿಯಿಂದ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಸಹಕಾರಿಗಳು ಈ ಯಾತ್ರೆಯಲ್ಲಿ ಭಾಗವಹಿಸಲಿ ದ್ದಾರೆ.'ಸಹಕಾರ ರ ರತ್ನ' ದರ್ಮ ಜಾಗೃತಿ ಯಾತ್ರೆ'ಗೆ ತಮ್ಮೆಲ್ಲರ ಸಹಕಾರವನ್ನು ಈ ಮೂಲಕ ಕೋರುವು ದಾಗಿ ಶಶಿಕುಮಾರ್ ರೈ ಬಾಲ್ಯೋಟ್ಟು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ಎಸ್. ಬಿ. ಜಯರಾಮ ರೈ, ಕೆ.ಜೈರಾಜ್ ಬಿ.ರೈ, ಎಸ್.ಎನ್. ಮನ್ಮಥ, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X