ಸೆ.14: ವೆನ್ಲಾಕ್, ಲೇಡಿಗೋಷನ್ 175ನೇ ವರ್ಷದ ಸಂಭ್ರಮಾಚರಣೆ

ಮಂಗಳೂರು,ಆ.30: ವೆನ್ಲಾಕ್, ಲೇಡಿಗೋಷನ್ ಮತ್ತು ಕೆಎಂಸಿ ಆಸ್ಪತ್ರೆಗಳ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಗಳ 175ನೇ ವರ್ಷದ ಸಂಭ್ರಮಾಚರಣೆಗೆ ಚಾಲನೆ ನೀಡುವ ಕಾರ್ಯಕ್ರಮವು ಸೆ.14ರಂದು ಬೆಳಗ್ಗೆ 9ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





