ಫೆ.15: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು, ಫೆ.14: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆ.15ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ನಗರದ ಮಂಗಳಾದೇವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಕೈಗೊಳ್ಳಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ, ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ, ಕಾರ್ಪೊರೇಶನ್ ಕ್ವಾಟ್ರರ್ಸ್ ಮತ್ತು ಬಸ್‌ಬೇ ಮತ್ತಿತರ ಕಾಮಗಾರಿ ಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
ಸಂಜೆ 4ಕ್ಕೆ ವಾಮಂಜೂರು ತಿರುವೈಲುಗುತ್ತು ಶಂಕುಪೂಂಜ ದೇವುಪೂಂಜ ಜೋಡುಕರೆ ಕಂಬಳ ಟ್ರಸ್ಟ್ ಆಯೋಜನೆಯ ತುಳುನಾಡಿನ ಕಂಬಳ ತಿರುವೈಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





