ಸೆ.16: ಕಾರ್ಮಿಕ ಸಚಿವರ ದ.ಕ.ಜಿಲ್ಲಾ ಪ್ರವಾಸ

ಮಂಗಳೂರು, ಸೆ.14: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಸೆ.16ರಂದು ದ.ಕ. ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 2:30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಜಿಪಂ ಸಿಇಒ, ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚೆ ನಡೆಸುವರು.
ಅಪರಾಹ್ನ 3ಕ್ಕೆ ನಗರದ ಪಂಪ್‌ವೆಲ್ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5ಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. 6:30ಕ್ಕೆ ಕೊಡಗು ಜಿಲ್ಲೆಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





