ನ.16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕರಾವಳಿ ಉತ್ಸವ

ಮಂಗಳೂರು, ಅ.31: 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.16ರಂದು ಬೆಳಗ್ಗೆ 10ಗಂಟೆಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಉದ್ಘಾಟನೆಯಾಗಲಿದೆ ಎಂದು ಸಹಕಾರಿ ರತ್ನ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ಎಂಬ ವಿಷಯದೊಂದಿಗೆ ಈ ಸಪ್ತಾಹ ನಡೆಯಲಿದ್ದು, ರಾಜ್ಯದಲ್ಲೇ ಈ ಕಾರ್ಯಕ್ರಮವನ್ನು ಮಾದರಿ ಕಾರ್ಯಕ್ರಮವನ್ನಾಗಿಸಲು ಸಿದ್ಧತೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ನೇತತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ನಾನಾ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದರು.
ರಾಜ್ಯಮಟ್ಟದ 7 ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ನಮ್ಮ ಉಭಯ ಜಿಲ್ಲೆಗಳಲ್ಲೂ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ ಮಟ್ಟದ ಸಹಕಾರ ಸಪ್ತಾಹ ಆಚರಣೆಯ ಸಮಾರಂಭವನ್ನು ರಾಜ್ಯ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್ ಫರೀದ್ ಇವರು ಉದ್ಘಾಟಿಸ ಲಿರುವರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು ಇದರ ಅಧ್ಯಕ್ಷ ಜಿ.ಟಿ. ದೇವೇಗೌಡ ಉತ್ತಮ ಸ್ವ-ಸಹಾಯ ಸಂಘ ಪುರಸ್ಕಾರ, ಶಾಸಕರು, ಮಾಜಿ ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ ವಸ್ತುಪ್ರದರ್ಶನ ಮಳಿಗೆಗಳ ಉದ್ಘಾಟನೆ, ದ.ಕ. ಸಂಸದ ಕಾ.ಬ್ರಿಜೇಶ್ ಚೌಟ ಸಹಕಾರ ಸಪ್ತಾಹದ ಧ್ವಜಾರೋಹಣ ನೆರವೇರಿಸಲಿ ರುವರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಶಾಸಕರಾದ ವೇದವ್ಯಾಸ್ ಡಿ. ಕಾಮತ್, ಡಾ.ಭರತ್ ಶೆಟ್ಟಿ ವೈ., ಯಶ್‌ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿಸೋಜಾ ಹಾಗೂ ಕಿಶೋರ್ ಕುಮಾರ್ ಬೊಟ್ಯಾಡಿ, ನಬಾರ್ಡ್ ಬೆಂಗಳೂರು ಇದರ ಮುಖ್ಯ ಮಹಾಪ್ರಬಂಧಕ ರಾದ ಡಾ. ಸುರೇಂದ್ರ ಬಾಬು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆ ಸರಕಾರದ ಕಾರ್ಯದರ್ಶಿ ಎಸ್.ಬಿ. ಶೆಟ್ಟಣ್ಣನವರ್, ಸಹಕಾರ ಸಂಘ ಗಳ ನಿಬಂಧಕರಾದ ಟಿ.ಎಚ್.ಎಂ. ಕುಮಾರ್, ದ.ಕ. ಜಿಲ್ಲಾಕಾರಿ ದರ್ಶನ್ ಎಚ್.ಎನ್., ಪೊಲೀಸ್ ಕಮಿಷನರ್ ಸುೀರ್ ಕುಮಾರ್ ರೆಡ್ಡಿ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ನಂದಿನಿ ಹೊಸ ಉತ್ಪನ್ನಗಳ ಬಿಡುಗಡೆ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಪ್ರಸಾದ್ ರೆಡ್ಡಿ , ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್. ಎನ್., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಜಯಕರ ಶೆಟ್ಟಿ ಇಂದ್ರಾಳಿ, ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್ ಕೋಟ್ಯಾನ್, ವಾದಿರಾಜ ಶೆಟ್ಟಿ, ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಎಸ್.ಬಿ.ಜಯರಾಮ್ ರೈ, ಜೈರಾಜ್ ಬಿ .ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ.ಮಹೇಶ್ ಹಗ್ಡೆ , ಅಶೋಕ್ ಕುಮಾರ್ ಶೆಟ್ಟಿ , ಸದಾಶಿವ ಉಳ್ಳಾಲ್ , ರಾಜೇಶ್ ರಾವ್ , ಕುಶಲಪ್ಪ ಗೌಡ, ಎಸ್.ಎನ್.ಮನ್ಮಥ, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಸಹಕಾರಿ ಸಂಘಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಸಹಕಾರಿ ಸಂಘ ಗಳನ್ನು ಗುರುತಿಸುವ ಉದ್ದೇಶದಿಂದ ಸಹಕಾರ ಮಾಣಿಕ್ಯ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿ 5 ಗ್ರಾಂ ಚಿನ್ನದ ಪದಕ, 10,000ರೂ. ನಗದು ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುವುದು. ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳು, ಮಹಿಳಾ ಸಹಕಾರಿ ಸಂಘಗಳು, ಮೀನುಗಾರಿಕಾ ಸಹಕಾರಿ ಸಂಘಗಳು, ಕ್ರೆಡಿಟ್ ಸೊಸೈಟಿಗಳು, ಸೌಹಾರ್ದ ಸಹಕಾರಿ ಸಂಘಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 35,000 ಕ್ಕೂ ಅಧಿಕ ನವೋದಯ ಸ್ವ-ಸಹಾಯ ಗುಂಪುಗಳಿದ್ದು, ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ ಅತ್ಯುತ್ತಮ ಸ್ವ-ಸಹಾಯ ಗುಂಪುಗಳನ್ನು ಪುರಸ್ಕರಿಸಲಾಗುವುದು.







