ಫೆ.17: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು,ಫೆ.12:ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆ.17ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.17ರಂದು ಬೆಳಗ್ಗೆ 8ಕ್ಕೆ ನಗರದ ಸರ್ಕ್ಯೂಟ್ ಹೌಸ್ ಆಗಮಿಸುವರು. 10:30ಕ್ಕೆ ನಗರದ ಯೆಯ್ಯಾಡಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಜಿಲ್ಲಾ ಕೇಂದ್ರ ಗ್ರಂಥಾಲಯ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸು ವರು. 11:30ಕ್ಕೆ ದ.ಕ. ಜಿಪಂ ನೇತ್ರಾವತಿ ಸಭಾಂಗಣದಲ್ಲಿ 2024-25 ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕೆಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 4:30ಕ್ಕೆ ಜೋಕಟ್ಟೆ ಆಯುರ್ವೇದ ಆಸ್ಪತ್ರೆ ಆವರಣದಲ್ಲಿ ಆಸ್ಪತ್ರೆಯನ್ನು ರಾಷ್ಟ್ರೀಯ ಆಯುಷ್ ಅಭಿಯಾನದಡಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುವರು ಎಂದು ಪ್ರಕಟನೆ ತಿಳಿಸಿದೆ.
Next Story