ಫೆ.18: ಸಂವಿಧಾನ ಜಾಗೃತಿ ಸಮಾವೇಶ, ಪದಗ್ರಹಣ ಸಮಾರಂಭ

ಮಂಗಳೂರು, ಫೆ.13: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಸಮಾವೇಶ ಮತ್ತು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಸಮಾವೇಶ ಫೆ.18ರಂದು ಅಪರಾಹ್ನ 2 ಗಂಟೆಗೆ ಉರ್ವಸ್ಟೋರ್‌ನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸುದ್ದಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ದಿನೇಶ್ ಮೂಳೂರು ಅವರು ಕಾರ್ಯಕ್ರಮವನ್ನು ಕರ್ನಟಕ ಸರಕಾರದ ಲೋಕೋಪ ಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.
ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್.ಧರ್ಮಸೇನ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದರು
ವಿಧಾನ ಪರಿಷತ್ ಸದಸ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತು ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಗೇರು ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಮಾಜಿ ಶಾಸಕ ಜೆ.ಆರ್.ಲೋಬೊ , ಪಕ್ಷದ ಧುರೀಣರಾದ ಪದ್ಮರಾಜ್ ಆರ್ ಪೂಜಾರಿ, ಅಪ್ಪಿ ಎಸ್, ಮಿಥುನ್ ರೈ, ಇನಾಯತ್ ಅಲಿ, ರಕ್ಷಿತ್ ಶಿವರಾಂ, ಕೃಷ್ಣಪ್ಪ ಜಿ, ಎಂ.ಎಸ್.ಮುಹಮ್ಮದ್, ಶೇಖರ್ ಕುಕ್ಕೇಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರೇಮ್‌ನಾಥ್ ಬಳ್ಳಾಲ್‌ಭಾಗ್, ಜಿಲ್ಲಾ ಪರಿಶಿಷ್ಟ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಪ್ರಸಾದ್, ಕಿರಣ್ ಕುಮಾರ್, ಮಾಜಿ ಕಾರ್ಪೊರೇಟರ್‌ಗಳಾದ ನಾಗವೇಣಿ, ವಿಜಯಲಕ್ಷ್ಮೀ , ಪರಿಶಿಷ್ಟ ಘಟಕದ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಭಿಲಾಷ್ ಕೃಷ್ಣಾಪುರ, ಸುಳ್ಯ ಬ್ಲಾಕ್ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್, ಪುತ್ತೂರು ಬ್ಲಾಕ್ ಅಧ್ಯಕ್ಷ ಬಾಬು ಮರಿಕೆ, ಸರೋಜಿನಿ ಬಂಟ್ವಾಳ ಉಪಸ್ಥಿತರಿದ್ದರು.







