ಮಾ.18ರಂದು ಡಾ.ಆರ್.ಕೆ.ನಾಯರ್ ಪ್ರೆಸ್ ಕ್ಲಬ್ ಗೌರವ ಅತಿಥಿ

ಡಾ.ಆರ್.ಕೆ.ನಾಯರ್
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.18ರಂದು ಬೆಳಗ್ಗೆ 11:30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗುಜರಾತ್ನ ಸ್ಮತಿ ವನದ ರೂವಾರಿ, ಪರಿಸರವಾದಿ ಡಾ.ಆರ್.ಕೆ.ನಾಯರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್.ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story