ಎ18ರ ವಕ್ಫ್ ತಿದ್ದುಪಡಿ ಪ್ರತಿಭಟನೆಗೆ ಉಳ್ಳಾಲ ದರ್ಗಾ ಸಮಿತಿ ಬೆಂಬಲ
ಉಳ್ಳಾಲ:ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಎ18 ರಂದು ಅಡ್ಯಾರ್ ಷಾ ಗಾರ್ಡನ್ ನಲ್ಲಿ ನಡೆಯುವ ಪ್ರತಿಭಟನೆಗೆ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಉಳ್ಳಾಲ ಸಾವಿರ ಜಮಾಅತಿನ ಎಲ್ಲರೂ ನಾಳಿನ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಉಳ್ಳಾಲ ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಕರೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿ ಕರ್ನಾಟಕ ಉಲಮಾ ಕೋರ್ಡಿನೇಶನ್ ಕಮಿಟಿಯು ಅವಿಭಜಿತ ದ.ಕ.ಜಿಲ್ಲಾ ಖಾಝಿಗಳ ನೇತೃತ್ವದಲ್ಲಿ ಎ.18 ರಂದು ಸಂಜೆ 3 ಗಂಟೆಗೆ ಅಡ್ಯಾರ್ ಷಾ ಗಾರ್ಡನ್ ನಲ್ಲಿ ಆಯೋಜಿಸಲಾದ ಪ್ರತಿಭಟನಾ ಸಮಾವೇಶದಲ್ಲಿ ಜನರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸುವಂತೆ ವಿನಂತಿಸಿದೆ.
Next Story