ಡಿ.19ರಂದು ಜಿಲ್ಲಾಧಿಕಾರಿ ಕಚೇರಿ ಚಲೋ ಕಾರ್ಯಕ್ರಮ

ಮಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.19ರಂದು ಬೆಳಗ್ಗೆ 10 ಗಂಟೆಗೆ ಸಿಪಿಎಂನಿಂದ ಜಿಲ್ಲಾಧಿಕಾರಿ ಕಚೇರಿ ಚಲೋ ಕಾರ್ಯಕ್ರಮ ನಡೆಯಲಿದೆ.
ನಮ್ಮ ಜಿಲ್ಲೆಯಲ್ಲಿ ಉದ್ಯೋಗ ಆಧಾರಿತ ಪರಿಸರಕ್ಕೆ ಮಾರಕವಲ್ಲದ ಕೈಗಾರಿಕೆಗಳನ್ನು ಸ್ಥಾಪಿಸಬೇಕು, ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು. ವೆನ್ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸ ಬೇಕು. ಜಿಲ್ಲೆಯನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಬೇಕು, ಟೋಲ್ ದರವನ್ನು ನ್ಯಾಯಯುತವಾಗಿ ನಿಗದಿಪಡಿಸಬೇಕು, ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಡೆದಿರುವ ಅಕ್ರಮ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಬೇಕು ಮತ್ತಿತರ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜ್ಯೋತಿ ವೃತ್ತದಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಯಾದವ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





