Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.19ರಂದು ವಿಶಿಷ್ಟರಿಗಾಗಿ ವಿಶೇಷ ಮೇಳ

ಜ.19ರಂದು ವಿಶಿಷ್ಟರಿಗಾಗಿ ವಿಶೇಷ ಮೇಳ

ವಾರ್ತಾಭಾರತಿವಾರ್ತಾಭಾರತಿ13 Jan 2025 6:14 PM IST
share

ಮಂಗಳೂರು, ಜ.13: ಸೇವಾ ಭಾರತಿಯ ಅಂಗಸಂಸ್ಥೆಯಾದ ಆಶಾ ಜ್ಯೋತಿ ನೇತೃತ್ವದಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’ ಜ.19ರಂದು ಬೆಳಗ್ಗೆ 8.30ರಿಂದ ಸಂಜೆ 4.15ರವರೆಗೆ ಡೊಂಗರಕೇರಿ ಕೆನರಾ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ.

ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಮೇಳಕ್ಕೆ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ರಾಮ ಕುಮಾರ್ ಬೇಕಲ್, ಲಂಚುಲಾಲ್ ಕೆ.ಎಸ್ ಭಾಗವಹಿಸಲಿದ್ದಾರೆ ಎಂದು ಆಶಾಜ್ಯೋತಿ ಇದರ ಗೌರವಾಧ್ಯಕ್ಷ ಡಾ.ವಿ.ಮುರಳೀಧರ ನಾಯಕ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೇವಾ ಭಾರತಿ ಸಂಸ್ಥೆ ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಮಟ್ಟ ಸುಧಾರಿಸಲು ಶ್ರಮಿಸುತ್ತಾ ಬಂದಿದೆ. ಇದರ ಅಂಗ ಸಂಸ್ಥೆಯಾದ ಆಶಾಜ್ಯೋತಿಯು 1998ರಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಈ ಪೈಕಿ ವಿಶಿಷ್ಟರಿಗಾಗಿ ವಿಶೇಷ ಮೇಳವೂ ಒಂದು. ವಿಶೇಷ ಚೇತನರನ್ನು ಒಟ್ಟು ಸೇರಿಸಿ ಅವರಿಗೆ ಮನರಂಜನೆ ಒದಗಿಸುವ ಜೊತೆಗೆ ಅವರಲ್ಲಿ ಚೈತನ್ಯ, ಆತ್ಮವಿಶ್ವಾಸ ತುಂಬುವುದು ಮೇಳದ ಉದ್ದೇಶ. ಕಳೆದ ವರ್ಷ 1200 ಮಂದಿ ವಿಶೇಷ ಚೇತನರು ಹಾಗೂ 1600 ಮಂದಿ ಹೆತ್ತವರು ಸೇರಿದಂತೆ 2800ಕ್ಕೂ ಅಧಿಕ ಮಂದಿ ಮೇಳದಲ್ಲಿ ಭಾಗವಹಿಸಿದ್ದರು. ಈ ವರ್ಷವೂ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದವರು ಹೇಳಿದರು.

ದಿವ್ಯಾಂಗರಲ್ಲಿರುವ ಸುಪ್ತ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವುದು, ಅವರನ್ನು ಸ್ವಾವಲಂಬಿ ಗಳನ್ನಾ ಮಾಡುವುದು, ಪೋಷಕರಲ್ಲಿ ಆತ್ಮ ವಿಶ್ವಾಸ ತುಂಬುವುದು, ಅಂಗವಿಕಲತೆಯ ಗುರುತು ಚೀಟಿಯನ್ನು ಪಡೆಯಲು ಸಹಕರಿಸುವುದು, ಅವರಿಗಾಗಿ ವೈದ್ಯಕೀಯ ತಪಾಸಣಾ ಶಿಬಿರ, ಆಪ್ತ ಸಲಹಾ ಶಿಬಿರಗಳನ್ನು ನಡೆಸುವುದು, ಸರಕಾರಿ ಹಾಗೂ ಅರೆ ಸರಕಾರಿ ಸಂಸ್ಥೆಗಳಿಂದ ದಿವ್ಯಾಂಗರಿಗೆ ಸಿಗುವ ಮಾಹಿತಿ ಒದಗಿಸುವುದು, ವಿಶೇಷ ಸಾಧನೆ ಮಾಡಿದ ದಿವ್ಯಾಂಗರನ್ನು ಸನ್ಮಾನಿಸುವುದು ಇತ್ಯಾದಿ ಕಾರ್ಯಕ್ರಮಗಳನ್ನು ಸೇವಾ ಭಾರತಿ ಸಂಸ್ಥೆ ಆಯೋಜಿಸುತ್ತಾ ಬಂದಿದೆ ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆಶಾಜ್ಯೋತಿ ಸಂಸ್ಥೆಯ ಅಧ್ಯಕ್ಷೆ ಗೀತಾ ಲಕ್ಷ್ಮೀಶ್, ಕಾರ್ಯದರ್ಶಿ ಎಸ್.ರವಿನಾಥ ಕುಡ್ವ, ಜೊತೆ ಕಾರ್ಯದರ್ಶಿ ಗಣರಾಜ ವೈ, ಕೋಶಾಧಿಕಾರಿ ಕೆ.ವಿಶ್ವನಾಥ ಪೈ, ಜೊತೆ ಕೋಶಾಧಿಕಾರಿ ಬಿ.ಅಶ್ವತ್ಥಾಮ ರಾವ್, ಸೇವಾ ಭಾರತಿಯ ಗೌರವಾ ಕಾರ್ಯದರ್ಶಿ ಎಚ್.ನಾಗರಾಜ ಭಟ್, ಕೋಶಾಧಿಕಾರಿ ಪಿ.ವಿನೋದ್ ಶೆಣೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X