Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.19ರಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ...

ಜ.19ರಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಕೋಟಿ ಚೆನ್ನಯ ಕ್ರೀಡೋತ್ಸವ

ವಾರ್ತಾಭಾರತಿವಾರ್ತಾಭಾರತಿ15 Jan 2025 9:29 PM IST
share
ಜ.19ರಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಕೋಟಿ ಚೆನ್ನಯ ಕ್ರೀಡೋತ್ಸವ

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಯುವವಾಹಿನಿ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಸಹಕಾರದೊಂದಿಗೆ ಬಂಟ್ವಾಳ ತಾಲೂಕು‌ ಮಟ್ಟದ ಕೋಟಿ‌ ಚೆನ್ನಯ ಕ್ರೀಡೋತ್ಸವವು ಜನವರಿ 19 ರಂದು ಬಂಟ್ವಾಳದ ಎಸ್.ವಿ.ಎಸ್. ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ತಿಳಿಸಿದರು.

ಬಿ.ಸಿ.ರೋಡಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕ್ರೀಡಾಕೂಟದಲ್ಲಿ ಬಂಟ್ವಾಳ ತಾಲೂಕಿನ 24 ಬಿಲ್ಲವ ಗ್ರಾಮ ಸಮಿತಿಗಳ ತಂಡಗಳು ವಿವಿಧ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಲಿದೆ. ಮಕ್ಕಳು, ಹಿರಿಯರು, ಮಹಿಳೆಯರು ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.

ಭಾರತ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಕ್ರೀಡೋತ್ಸವ ಉದ್ಘಾಟಿಸಲಿದ್ದು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ. ಸಂಜೀವ ಪೂಜಾರಿ ಗುರುಕೃಪಾ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಗ್ರಾಮ ಸಮಿತಿಗಳ ಆಕರ್ಷಕ ಪಥ ಸಂಚಲನ ನಡೆಯಲಿದ್ದು, ವಿಧಾನ ಪರಿಷತ್ ಶಾಸಕ ಬಿ. ಕೆ. ಹರಿಪ್ರಸಾದ್ ಗೌರವ ರಕ್ಷೆ ಸ್ವೀಕರಿಸಲಿದ್ದು, ಡಿ.ವೈ.ಎಸ್.ಪಿ ಎಸ್. ವಿಜಯ ಪ್ರಸಾದ್ ಧ್ವಜಾರೋಹಣ ಮಾಡಲಿರುವರು.

ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನಾ ಸಮಿತಿ, ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕ್ರೀಡಾ ಜ್ಯೋತಿ ಹಸ್ತಾಂತರಿಸಲಿದ್ದಾರೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್. ಎಸ್. ಸಾಯಿರಾಮ್, ಕೋಶಾಧಿಕಾರಿ ಆರ್ . ಪದ್ಮರಾಜ್, ಭಾರತ್ ಕೊ-ಅಪರೇಟಿವ್ ಬ್ಯಾಂಕ್ ಲಿ. ಮುಂಬೈ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ವೇದಕುಮಾ‌ರ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ ಚಂದ್ರ ಡಿ. ಸುವರ್ಣ, ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ ಲೊರೆಟೊ, ಮಾಜಿ ಶಾಸಕ ರುಕ್ಕಯ ಪೂಜಾರಿ, ಕಟಪಾಡಿ ವಿಶ್ವಾನಾಥ ಕ್ಷೇತ್ರದ ಅಧ್ಯಕ್ಷ ಬಿ. ಎನ್. ಶಂಕರ ಪೂಜಾರಿ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ನಮ್ಮ ಕುಡ್ಲ ಆಡಳಿತ ನಿರ್ದೇಶಕ ಲೀಲಾಕ್ಷ ಬಿ‌ ಕರ್ಕೇರಾ, ಬಿಲ್ಲವ ಬ್ರಿಗೇಡ್ ಅಧ್ಯಕ್ಷ ಸದಾನಂದ ಪೂಜಾರಿ, ಉದ್ಯಮಿ ಸುನಿತ್ ಕಿಶನ್, ಇನ್‌ ಸ್ಪೆಕ್ಟರ್ ಆಫ್ ಪೋಲಿಸ್ ಶಾಂತಾರಾಮ್ ಕುಂದರ್, ಡೆಪ್ಯೂಟಿ ಸುಪರಿಂಟೆಂಡೆಂಟ್ ಆಫ್ ಎಕ್ಸೈಸ್ ಗಾಯತ್ರಿ ಎಂ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದವರು ವಿವರಿಸಿದರು.

ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಹುಮಾನ ವಿತರಣೆ ಮಾಡಲಿರುವರು.

ಶಾಸಕ ಉಮಾನಾಥ ಕೋಟ್ಯಾನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಮುಂಬೈ ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಜಿ ಅಮೀನ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್, ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ, ಪುತ್ತೂರು ಅಕ್ಷಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಯಂತ ನಡುಬೈಲು, ತುಳುನಾಡು ಬಿರುವೆರ್ ಅಧ್ಯಕ್ಷ ಲೋಕೇಶ್ ಕೋಡಿಕೆರೆ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷೆ ಉರ್ಮೀಳಾ ರಮೇಶ್, ವೆನ್‌ಲಾಕ್ ಯುರೋಲಾಜಿ ವಿಭಾಗದ ಮುಖ್ಯಸ್ಥ ಡಾ ಸದಾನಂದ ಪೂಜಾರಿ, ಉದ್ಯಮಿ ಮನೋಜ್ ಸರಿಪಲ್ಲ, ಪ್ರಶಾಂತ್ ಸನಿಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿ ದ್ದಾರೆ ಎಂದವರು ವಿವರಿಸಿದರು.

ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ಅಧ್ಯಕ್ಷ ದಿನೇಶ್ ‌ಸುವರ್ಣ ರಾಯಿ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X