ಅ.19: ಮೀಫ್ ಫಲಾನುಭವಿ ವಿದ್ಯಾರ್ಥಿಗಳ ಮತ್ತು ಪ್ರಾಯೋಜಕರ ಸಮಾವೇಶ

ಮಂಗಳೂರು, ಅ.17: ಮುಸ್ಲಿಂ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ಸ್ ಫೆಡರೇಶನ್ (ಮೀಫ್) ವತಿಯಿಂದ ಉಚಿತ ಸೀಟುಗಳನ್ನು ಪಡೆದ ವಿದ್ಯಾರ್ಥಿಗಳ ಮತ್ತು ಸೀಟುಗಳನ್ನು ಒದಗಿಸಿದ ವಿದ್ಯಾ ಸಂಸ್ಥೆಗಳ ಪ್ರಾಯೋಜಕರ ಸಮಾವೇಶವು ಅ.19ರಂದು ಬೆಳಗ್ಗೆ 10ಕ್ಕೆ ಕೂಳೂರಿನಲ್ಲಿರುವ ಯೆನೆಪೊಯ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಯೆನೆಪೊಯ ಡೀಮ್ಡ್ ವಿವಿಯ ಕುಲಾಧಿಪತಿ ಡಾ. ವೈ. ಅಬ್ದುಲ್ಲಾ ಕುಂಞಿ ಸಮಾವೇಶ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಲೈಡ್ ಆ್ಯಂಡ್ ಹೆಲ್ತ್‌ಕೇರ್ ಕೌನ್ಸಿಲ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ. ಇಫ್ತಿಕಾರ್ ಅಲಿ ಫರೀದ್ ಭಾಗವಹಿಸಲಿದ್ದಾರೆ.
ಮೀಫ್ ಕೇಂದ್ರ ಸಮಿತಿಯ ಗೌರವ ಅಧ್ಯಕ್ಷ ಉಮರ್ ಟೀಕೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮೀಫ್ ಕೇಂದ್ರ ಸಮಿತಿಯ ಗೌರವ ಸಲಹೆಗಾರ ಸೈಯದ್ ಬ್ಯಾರಿ ಮೀಫ್ ಬೆಳ್ಳಿಹಬ್ಬದ ಲೋಗೋ ಅನಾವರಣ ಮಾಡಲಿದ್ದಾರೆ. ಕರಾವಳಿ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷ ಎಂ.ಎ. ಗಫೂರ್ ಮತ್ತು ರಾಜ್ಯ ಕಾರ್ಮಿಕ ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರನ್ನು ಸನ್ಮಾನಿಸಲಾಗುವುದು ಎಂದು ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





