ಡಿ.19: ಯುನಿವೆಫ್‌ನಿಂದ ಕುದ್ರೋಳಿಯಲ್ಲಿ ಸೀರತ್ ಸಮಾವೇಶ

ಮಂಗಳೂರು, ಡಿ.18: ಯುನಿವೆಫ್ ಕರ್ನಾಟಕವು ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 20ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಸೀರತ್ ಸಮಾವೇಶವು ಡಿ.19ರ ರಾತ್ರಿ 7:45ಕ್ಕೆ ಕುದ್ರೋಳಿಯ ಅ1 ಭಾಗ್‌ನಲ್ಲಿ ನಡೆಯಲಿದೆ.
ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಱಶೋಷಣೆಯ ವಿರುದ್ಧ ಪ್ರವಾದಿ (ಸ)ಯ ನಡೆ ಎಂಬ ವಿಷಯದಲ್ಲಿ ಪ್ರಮುಖ ಭಾಷಣ ಮಾಡಲಿರುವರು. ಮುಸ್ಲಿಮ್ ಲೀಗ್ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಭಿಯಾನದ ಸಂಚಾಲಕ ಯು.ಕೆ. ಖಾಲಿದ್, ಕುದ್ರೋಳಿ ಶಾಖೆಯ ಅಧ್ಯಕ್ಷ ಮುಹಮ್ಮದ್ ಸೈಫುದ್ದೀನ್, ಕುದ್ರೋಳಿ ಶಾಖೆಯ ಹಿರಿಯ ಸದಸ್ಯರಾದ ಅಬೂಬಕರ್ ಮತ್ತು ಅಬ್ದುರ‌್ರಶೀದ್ ಉಪಸ್ಥಿತರಿರುವರು ಎಂದು ಕಾರ್ಯಕ್ರಮದ ಸಂಚಾಲಕ ಮುಹಮ್ಮದ್ ಸೈಫುದ್ದೀನ್ ತಿಳಿಸಿದ್ದಾರೆ.
Next Story





