ಮಾ.20: ಹೆದ್ದಾರಿ ಭೂ ಸ್ವಾಧೀನದ ಪರಿಹಾರ ಪಾವತಿ
ಮಂಗಳೂರು, ಮಾ.17: ರಾಷ್ಟ್ರೀಯ ಹೆದ್ದಾರಿ ಸಾಣೂರು ಬಿಕರ್ನಕಟ್ಟೆ ಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‌ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಮಾ.20ರಂದು ಬೆಳಗ್ಗೆ 10:30ಕ್ಕೆ ಗಂಜಿಮಠ ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ.
ತೆಂಕ ಎಡಪದವು, ಬಡಗ ಎಡಪದವು, ಬಡಗ ಉಳಿಪಾಡಿ, ತೆಂಕ ಉಳಿಪಾಡಿ, ಮೂಡುಪೆರಾರ, ಕಂದಾವರ ಮೂಳೂರು, ಅಡ್ಡೂರು, ತಿರುವೈಲು, ಕುಡುಪು ಗ್ರಾಮಗಳ ಜಮೀನಿನ ಮಾಲಕರು ಪರಿಹಾರ ಮೊತ್ತವನ್ನು ಪಡೆಯಬಹುದು. ಅದಾಲತ್ ಕಾರ್ಯಕ್ರಮದಲ್ಲಿ ಪರಿಹಾರ ಪಡೆಯಲು ಕ್ಲೈಮ್ ಸಲ್ಲಿಸಿದ ಭೂಮಾಲಕರು ಅವಾರ್ಡ್ ನೋಟಿಸ್‌ನಲ್ಲಿ ತಿಳಿಸಿರುವ ದಾಖಲೆಗಳೊಂದಿಗೆ ಹಾಜರಾಗಿ ಕ್ಲೈಮ್ ಸಲ್ಲಿಸುವಂತೆ ಹಾಗೂ ಈಗಾಗಲೇ ಕ್ಲೈಮ್ ಸಲ್ಲಿಸಿದ ಭೂಮಾಲಕರು ಹಾಜರಾಗಿ ಅಗತ್ಯ ದಾಖಲೆಗಳಿಗೆ ಸಹಿ ಮಾಡಬೇಕು ಎಂದು ವಿಶೇಷ ಭೂಸ್ವಾಧೀನಾಧಿಕಾರಿ ಮುಹಮ್ಮದ್ ಇಸಾಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story