ಜ.20-21: ಪೀಠಾಸೀನಾಧಿಕಾರಿಗಳ ಸಮ್ಮೇಳನಕ್ಕೆ ಸ್ಪೀಕರ್ ಖಾದರ್

ಮಂಗಳೂರು,ಜ.18: ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಜ.20 ಮತ್ತು 21ರಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ಭಾಗವಹಿಸುವರು.
ಸಂವಿಧಾನದ 75ನೇ ವಾರ್ಷಿಕೋತ್ಸವದಲ್ಲಿ ʼಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಸಂಸತ್ತು ಮತ್ತು ರಾಜ್ಯ ಶಾಸಕಾಂಗ ಸಂಸ್ಥೆಗಳ ಕೊಡುಗೆʼ ಎಂಬ ವಿಷಯದಲ್ಲಿ ಯು.ಟಿ.ಖಾದರ್ ಅನಿಸಿಕೆಗಳನ್ನು ಮಂಡಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





