ಫೆ.21: ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟನೆ

ಮಂಗಳೂರು, ಫೆ.20: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ದ ಫೆ. 21 ರಂದು 3:30ಕ್ಕೆ ಎಸ್‌ಕೆಎಸ್‌ಎಸ್‌ಎಫ್ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಸಮಾವೇಶನ ನಡೆಯಲಿದೆ.
ಈ ಸಭೆಯಲ್ಲಿ ಎಸ್‌ಕೆಎಸ್‌ಎಸ್‌ಎಫ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಅನೀಸ್ ಕೌಸರಿ ಮತ್ತು ಎಸ್‌ವೈಎಸ್ ದ.ಕ ಜಿಲ್ಲಾಧ್ಯಕ್ಷ ಮೌಲಾನಾ ಅಝೀಝ್ ದಾರಿಮಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





