ಜೂ.21: ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಫೈಲ್ ಫೋಟೊ
ಮಂಗಳೂರು,ಜೂ.16:ದ.ಕ.ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಹಾಗೂ ಯೋಗ ಸಂಘಟನೆಗಳ ಸಹಯೋಗದೊಂದಿಗೆ ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯ ವಿವಿಧೆೆಡೆಗಳಲ್ಲಿ ಯೋಗ ಸಂಘಟನೆಗಳು/ಆಯುಷ್ ಕಾಲೇಜುಗಳು, ಆಯುಷ್ಮಾನ್ ಆರೋಗ್ಯ ಮಂದಿರಗಳು ಸೇರಿ ಸಾರ್ವಜನಿಕರಿಗೆ ಯೋಗ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ನಗರದ ಪುರಭವನದಲ್ಲಿ ಜೂ.21ರಂದು ಬೆಳಗ್ಗೆ 8ಕ್ಕೆ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





