Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 21ನೇ ಕಲಾಕಾರ್ ಪುರಸ್ಕಾರಕ್ಕೆ ಕಾಸರಗೋಡು...

21ನೇ ಕಲಾಕಾರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನಾ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ21 Oct 2025 9:24 PM IST
share
21ನೇ ಕಲಾಕಾರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನಾ ಆಯ್ಕೆ

ಮಂಗಳೂರು, ಅ.21: ಕುಂದಾಪುರದ ಕಾರ್ವಾಲ್ ಮನೆತನ ಹಾಗೂ ಮಾಂಡ್ ಸೊಭಾಣ್ ಜಂಟಿಯಾಗಿ, ಕೊಂಕಣಿ ಕಲೆ, ಸಂಸ್ಕೃತಿಗೆ ಮಹತ್ತರ ಕೊಡುಗೆ ನೀಡಿದ ಕಲಾವಿದರನ್ನು ಗುರುತಿಸಿ ನೀಡುವ 21ನೇ ವರ್ಷದ ಕಲಾಕಾರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನಾ ಇವರನ್ನು ಆಯ್ಕೆ ಮಾಡಲಾಗಿದೆ.

2025 ನವೆಂಬರ್ 02 ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 6:00 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ರೂ. 50,000 ನಗದು ಒಳಗೊಂಡ ಈ ಪುರಸ್ಕಾರವನ್ನು ಪ್ರದಾನ ಮಾಡಲಿರುವರು.

ಭಾಷಾ ತಜ್ಞ ಡೊ ಪ್ರತಾಪ್ ನಾಯ್ಕ್, ಮತ್ತು ಮಸ್ಕತ್ ನಲ್ಲಿರುವ ಉದ್ಯಮಿ ಹಾಗೂ ಶ್ರೇಷ್ಟ ಕಲಾಪ್ರೋತ್ಸಾಹಕ ಸ್ಟ್ಯಾನ್ಲಿ ಫೆರ್ನಾಂಡಿಸ್ (ದಾಟ್ಟು) ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು. ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ. ಪಿಂಟೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

ಶ್ರೀನಿವಾಸ ರಾವ್ ಎಸ್. (68) ಕಾಸರಗೋಡು ಚಿನ್ನಾ ಎಂದು ರಂಗಲೋಕದಲ್ಲಿ ಪ್ರಸಿದ್ಧರು. ನಟನೆಯಲ್ಲಿ ಚಿನ್ನದ ಪದಕದೊಡನೆ ಡಿ ಎಫ್‌ಎ ಪದವಿ ಪಡೆದಿದ್ದಾರೆ. 1969ರಲ್ಲಿ ರಂಗ ಪ್ರವೇಶ ಮಾಡಿದ ಇವರು ಕೊಂಕಣಿ, ಕನ್ನಡ, ತುಳು, ಮಲಯಾಳಂ ಹಾಗೂ ಇಂಗ್ಲೀಷಿನ 400ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಹಲವು ನಾಟಕಗಳಿಗೆ ನಿರ್ದೇಶನ ನೀಡಿದ್ದಾರೆ. ಭಾಷಾಂತರ ಮಾಡಿದ್ದಾರೆ. ಆಕಾಶವಾಣಿಯಲ್ಲಿ, ದೂರದರ್ಶನದಲ್ಲಿ ತಮ್ಮ ಪ್ರತಿಭೆ ಮೆರೆದಿ ದ್ದಾರೆ. ಲಾರಿ ನಾಟಕ, ಗೀತ ಸಂಗೀತ ರಥ, ಯಕ್ಷತೇರು, ಕನ್ನಡ ಸ್ವರ, ಮೂಕಾಭಿನಯ ಇತ್ಯಾದಿ ಪ್ರಯೋಗಗಳ ನೂರಾರು ಪ್ರದರ್ಶನಗಳನ್ನು ಮಾಡಿದ್ದಾರೆ. ಸಿನಿಮಾ ನಿರ್ದೇಶನ ಹಾಗೂ ನಟನೆಯಲ್ಲೂ ಕೈಯಾಡಿಸಿದ್ದಾರೆ. ಅವರು ನಿರ್ದೇಶಿಸಿದ ‘ಉಜ್ವಾಡು’ಕೊಂಕಣಿ ಚಲನಚಿತ್ರಕ್ಕೆ 2011ರ ಕರ್ನಾಟಕ ರಾಜ್ಯ ಉತ್ತಮ ಪ್ರಾದೇಶಿಕ ಚಲನಚಿತ್ರದ ಗೌರವ ಲಭಿಸಿದೆ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. ‘ಘರ್ ಘರ್ ಕೊಂಕಣಿ’ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಕೊಂಕಣಿಯ ಎಲ್ಲಾ ಸಮುದಾಯಗಳ ನಡುವೆ ಭಾಷಾಭಿಮಾನ ಮೂಡಿಸಿದ್ದಾರೆ. ರಂಗ ಚಿನ್ನಾರಿ ಟ್ರಸ್ಟ್ ಮೂಲಕ ಹಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯಕ್ಕೂ ಕೊಡುಗೆ ನೀಡಿದ್ದಾರೆ. ಅವರ ‘ತೀಸ್ ಕಾಣಿಯೊ’ ಅನುವಾದ ಸಂಗ್ರಹಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಪುರಸ್ಕಾರ ಲಭಿಸಿದೆ. ಕೊಂಕಣಿ ಅಕಾಡೆಮಿಯ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ರಿ, ಕೇರಳ ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಟಕ ರಂಗದಲ್ಲಿ ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿಗಳೊಡನೆ ಹಲವಾರು ಸನ್ಮಾನಗಳು ದೇಶ ವಿದೇಶಗಳಲ್ಲಿ ಲಭಿಸಿವೆ.

ಸನ್ಮಾನ ಕಾರ್ಯಕ್ರಮದ ನಂತರ ತಿಂಗಳ ವೇದಿಕೆ ಸರಣಿಯ 287ನೇ ಕಾರ್ಯಕ್ರಮದಲ್ಲಿ ಮ್ಯಾಕ್ಸಿಮ್ ಪಿರೇರಾ ಮತ್ತು ತಂಡದಿಂದ 17 ನೇ ಮ್ಯಾಕ್ಸಿಮ್ ನೈಟ್ ರಸಮಂಜರಿ ನಡೆಯಲಿದೆ.

ಕೊಂಕಣಿ ಕಲಾವಿದರನ್ನು ಗೌರವಿಸಲು 2005 ರಲ್ಲಿ ಕಾರ್ವಾಲ್ ಮನೆತನದ ಹೆಸರಲ್ಲಿ ಮಾಂಡ್ ಸೊಭಾಣ್ ಸಹಯೋಗದಲ್ಲಿ ಕಲಾಕಾರ್ ಪುರಸ್ಕಾರವನ್ನು ಸ್ಥಾಪಿಸಲಾಗಿತ್ತು. ಇದುವರೆಗೆ ಅರುಣ್‌ರಾಜ್ ರೊಡ್ರಿಗಸ್ (ನಾಟಕ), ಜೊಯೆಲ್ ಪಿರೇರಾ (ಸಂಗೀತ), ಹ್ಯಾರಿ ಡಿ ಸೋಜ (ಬ್ರಾಸ್ ಬ್ಯಾಂಡ್), ವಂ. ಚಾರ್ಲ್ಸ್ ವಾಸ್ (ಭಕ್ತಿ ಸಂಗೀತ), ಅನುರಾಧಾ ಧಾರೇಶ್ವರ್ (ಸಂಗೀತ), ಸಂತ ಭದ್ರಗಿರಿ ಅಚ್ಯುತದಾಸ್, ಬೆಂಗಳೂರು (ಹರಿಕಥೆ), ಜೇಮ್ಸ್ ಲೊಪಿಸ್, ಹೊನ್ನಾವರ (ಬ್ರಾಸ್ ಬ್ಯಾಂಡ್), ನೊರ್ಬರ್ಟ್ ಗೊನ್ಸಾಲ್ವಿಸ್ (ಸಂಗೀತ), ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ (ನಾಟಕ), ರೋಶನ್ ಡಿಸೋಜ (ಸಂಗೀತ), ಕ್ರಿಸ್ಟೋಫರ್ ಡಿ ಸೋಜ (ನಾಟಕ), ಆವಿಲ್ ಡಿಕ್ರೂಜ್ (ನೃತ್ಯ) ಎಂ. ಗೋಪಾಲ ಗೌಡ (ಜನಪದ), ಡೊಲ್ಲಾ ಮಂಗಳೂರು (ನಾಟಕ), ಐರಿನ್ ರೆಬೆಲ್ಲೊ (ಮದುವೆ ಸೊಭಾನೆ ಹಾಡುಗಳು), ಅನಿತಾ ಡಿಸೋಜ (ಗಾಯನ), ನಿಹಾಲ್ ತಾವ್ರೊ (ಗಾಯನ), ಮೆಲ್ವಿನ್ ಪೆರಿಸ್ (ಸಂಗೀತ), ಆಪೊಲಿನಾರಿಸ್ ಡಿಸೋಜ (ಗಾಯನ) ಮತ್ತು ರೋಶನ್ ಬೇಳ (ಸಂಗೀತ) ಇವರಿಗೆ ಈ ಪುರಸ್ಕಾರ ಲಭಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X