ಜೂ.23: ಪ್ರೆಸ್ ಕ್ಲಬ್ ಗೌರವ ಅತಿಥಿಯಾಗಿ ಝಕರಿಯಾ ಜೋಕಟ್ಟೆ

ಝಕರಿಯಾ ಜೋಕಟ್ಟೆ
ಮಂಗಳೂರು, ಜೂ.21: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜೂ.23ರಂದು ಪೂ.11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಎಂಎಸ್ಇಝಡ್ನ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ರಾಮಚಂದ್ರ ಭಂಡಾರ್ಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





