ಡಿ.24: ‘ಸವಾಲು ಗೆದ್ದ ಹರೇಕಳದ ತಾಯಿ ಮಗಳು ‘ಮೈಮೂನ-ಮರ್ಝೀನಾ’ ಕೃತಿ ಬಿಡುಗಡೆ

ಉಳ್ಳಾಲ, ಡಿಜಿ.23: ವಿಧವೆ ತಾಯಿ-ಸಾಫ್ಟ್‌ವೇರ್ ಇಂಜಿನಿಯರ್ ಮಗಳ ಹೈನೋದ್ಯಮದ ಯಶೋಗಾಥೆಯ ಬಗ್ಗೆ ಪತ್ರಕರ್ತ ಅನ್ಸಾರ್ ಇನೋಳಿ ಬರೆದ ‘ಸವಾಲು ಗೆದ್ದ ಹರೇಕಳದ ತಾಯಿ-ಮಗಳು ‘ಮೈಮೂನಾ-ಮರ್ಝೀನಾ’ ಕೃತಿ ಬಿಡುಗಡೆ ಕಾರ್ಯಕ್ರಮವು ಡಿ.24ರ ಬೆಳಗ್ಗೆ ಬೆಳಗ್ಗೆ 10:30ಕ್ಕೆ ಮೈಮುನಾ ಅವರ ಸ್ವಗೃಹದಲ್ಲಿ ನಡೆಯಲಿದೆ.
ಯೆನೆಪೊಯ ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಸಂಯೋಜಕಿ ಡಾ.ಅಶ್ವಿನಿ ಶೆಟ್ಟಿ, ಸೋಮಶೇಖರ್, ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ನರೇಗಾದ ಮಾಜಿ ಒಂಬುಡ್ಸ್‌ಮೆನ್ ಶೀನ ಶೆಟ್ಟಿ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಮುಡಿಪು ಜನಜೀವನ ಅಧ್ಯಕ್ಷ ರಮೇಶ್ ಶೇಣವ, ಲಯನ್ಸ್ ಪ್ರಾಂತೀಯ ಸಲಹೆಗಾರ ರಾಧಾಕೃಷ್ಣ ರೈ ಉಮಿಯ, ಜಮೀಯತುಲ್ ಫಲಾಹ್ ಉಳ್ಳಾಲ್ ತಾಲೂಕು ಅಧ್ಯಕ್ಷ ಅಬ್ದುಲ್ ನಾಸೀರ್ ಕೆಕೆ, ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರಶಾಂತ್ ನಾಯಕ್, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಉದ್ಯಮಿ ನಾಸೀರ್ ಎನ್.ಎಸ್.ನಡುಪದವು, ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್, ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಖನ್ ಅಧ್ಯಕ್ಷ ತ್ಯಾಗಂ ಹರೇಕಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಹರೇಕಳ ಗ್ರಾಪಂ ಮಾಜಿ ಅಧ್ಯಕ್ಷ ಬದ್ರುದ್ದೀನ್ ಫರೀದ್ ನಗರ, ಗ್ರಾಪಂ ಅಧ್ಯಕ್ಷೆ ಗುಲಾಬಿ, ಉಪಾಧ್ಯಕ್ಷ ಅಬ್ದುಲ್ ಮಜೀದ್ ಎಂ.ಪಿ., ಪಿಡಿಒ ಮುತ್ತಪ್ಪ ಡಿ. ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.





