Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.24ರಿಂದ ವಿಶ್ವ ಸಮ್ಮೇಳನ, ಬಿಲ್ಲವ...

ಜ.24ರಿಂದ ವಿಶ್ವ ಸಮ್ಮೇಳನ, ಬಿಲ್ಲವ ಸಮುದಾಯದ ಸುವರ್ಣ ಸಿರಿ ಸಾಂಸ್ಕೃತಿಕ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 Jan 2025 10:07 PM IST
share
ಜ.24ರಿಂದ ವಿಶ್ವ ಸಮ್ಮೇಳನ, ಬಿಲ್ಲವ ಸಮುದಾಯದ ಸುವರ್ಣ ಸಿರಿ ಸಾಂಸ್ಕೃತಿಕ ಕಾರ್ಯಕ್ರಮ

ಸುರತ್ಕಲ್: ಅಗ್ಗಿದಕಳಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಜನವರಿ 24ರಿಂದ 26ರವರೆಗೆ ಸಸಿಹಿತ್ಲು ಕಡಲ ಕಿನಾರೆಯಲ್ಲಿ ವಿಶ್ವ ಸಮ್ಮೇಳನ ಹಾಗೂ ಬಿಲ್ಲವ ಸಮುದಾಯದ 26 ಪಂಗಡಗಳ ಸುವರ್ಣ ಸಿರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷರಾದ ತೇಜೋಮಯ ಮಾಹಿತಿ ನೀಡಿದ್ದಾರೆ.

ಅಗ್ಗಿದಕಳಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “1974ರಲ್ಲಿ ಸಸಿಹಿತ್ಲು ಗ್ರಾಮದ ಅಗ್ಗಿದಕಳಿಯದ ಹಿರಿಯರ ಮುತುವರ್ಜಿಯಲ್ಲಿ ಆರಂಭಗೊಂಡ ನಮ್ಮ ಸಂಸ್ಥೆ ಇಂದು ಸುವರ್ಣ ಮಹೋತ್ಸವ ವರ್ಷವನ್ನು ಆಚರಿಸುತ್ತಿದೆ. ವಿಶ್ವದಾದ್ಯಂತ ಇರುವ ಬಿಲ್ಲವರು, ತೀಯರು, ಆರ್ಯ ಈಡೀಗ, ದೀವರು, ನಾಮಧಾರಿಗಳು ಸೇರಿದಂತೆ ಎಲ್ಲಾ 26 ಪಂಗಡಗಳ ವಿಶ್ವ ಸಮ್ಮೇಳನ ನಡೆಯಲಿದೆ. ಅದರೊಂದಿಗೆ ಸಮುದಾಯದ ಯುವ ಮನಸುಗಳಲ್ಲಿ ಸುಪ್ತವಾಗಿರುವ ಪ್ರತಿಭೆಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಪಂಗಡಗಳ ಬಂಧು ಗಳಿಗಾಗಿ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧೆಗೆ ಪ್ರಥಮ ಬಹುಮಾನ 1 ಲಕ್ಷ ರೂಪಾಯಿ, ದ್ವಿತೀಯ 50 ಸಾವಿರ, ತೃತೀಯ 40 ಸಾವಿರ, ಚತುರ್ಥ 30 ಸಾವಿರ ಮತ್ತು ಪಂಚಮ ಬಹುಮಾನ 20 ಸಾವಿರ ನಗದು ಸಹಿತ ಶಾಶ್ವತ ಫಲಕ ಇದೆ, ಅದರೊಂದಿಗೆ ಭಾಗವಹಿಸಿ ಬಹುಮಾನ ಪಡೆಯದ ತಂಡಗಳಿಗೆ ತಲಾ ಹತ್ತು ಸಾವಿರ ನಗದು ನೀಡಲಾಗುವುದು. ದೇಶ ವಿದೇಶಗಳಿಂದ ಸಮಾಜದ ಬಂಧುಗಳು ಆಗಮಿಸುವ ಕಾರಣದಿಂದ ಅವರಿಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಬೀಚ್ ಫೆಸ್ಟಿವನ್, ಬಿಲ್ಲವರ ಜಾನಪದ ಬದುಕಿನ ಪ್ರದರ್ಶನ, ಪುಸ್ತಕ ಮೇಳ, ಎಲ್ಲವನ್ನೂ ಆಯೋಜಿಸಲಾಗಿದೆ.

ಮೂರು ದಿನದ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ವಿಧಾನ ಸಭೆಯ ಸಭಾಧ್ಯಕ್ಷರಾದ ಯುಟಿ ಖಾದರ್ ಸುವರ್ಣಾಕ್ಷರ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಸಾಧಕ ಸಮಾಜ ಬಂಧುಗಳಿಗೆ ನೀಡುವ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಕೇಂದ್ರದ ಮಾಜಿ ಸಚಿವರಾದ ಬಿ. ಜನಾರ್ದನ ಪೂಜಾರಿ ಅವರು ಪ್ರದಾನಿ ಸಲಿದ್ದಾರೆ. ತೆಲಂಗಾಣ ರಾಜ್ಯಪಾಲರಾದ ತಮಿಳ್ ಇಸೈ ಸೌಂದರ ರಾಜನ್, ಸಚಿವರಾದ ಮಧು ಬಂಗಾರಪ್ಪ, ತೆಲಂಣ ಗಾಣದ ಸಚಿವರಾದ ಪೊನ್ನಂ ಪ್ರಭಾಕರ್ ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನ ಬೀಚ್ ಫೆಸ್ಟಿವಲ್ ನಡೆಯಲಿದ್ದು, ಆಹಾರ ಮೇಳ, ಬೀಚ್ ಡ್ಯಾನ್ಸ್ ಸ್ಪರ್ಧೆ, ಬೀಚ್ ವಾಲಿಬಾಲ್, ತ್ರೋ ಬಾಲ್, ಬೀಚ್ ರಸಮಂಜರಿ ಮುಂತಾದ ಕಾರ್ಯಕ್ರಮ ನಿರಂತರ ನಡೆಯಲಿದೆ ಎಂದರು.

ಸ್ವಾಗತ ಸಮಿತಿಯ ಸತ್ಯಜಿತ್ ಸುರತ್ಕಲ್ ಮಾತಾಡಿ, “ಪಕ್ಷ ರಾಜಕೀಯ ರಹಿತವಾಗಿ ಬಿಲ್ಲವ ಸಮುದಾಯಕ್ಕೆ ಪ್ರಾತಿನಿಧ್ಯ ಸಿಗಬೇಕು ಎಂಬ ಉದ್ದೇಶದಿಂದ ಸಮಾಜದ ಎಲ್ಲರನ್ನೂ ಒಗ್ಗೂಡಿಸಿಕೊಂಡು ನಡೆಯುತ್ತಿರುವ ಕಾರ್ಯಕ್ರಮವನ್ನು ಜನವರಿ 25ರ ಶನಿವಾರ ಬೆಳಗ್ಗೆ 10:30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಜನವರಿ 26ರ ಬೆಳಗ್ಗೆ 9 ಗಂಟೆಯಿಂದ ಸಾಂಸ್ಕೃತಿಕ ಸ್ಪರ್ಧೆ ಆರಂಭಗೊಳ್ಳಲಿದ್ದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಕಡಲತಡಿಯಲ್ಲಿ ಸಂಗೀತ ರಸ ರಾತ್ರಿ ಕಾರ್ಯಕ್ರಮ ಜರುಗಲಿದೆ ಎಂದರು.

ಅಗ್ಗಿದಕಳಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಕುಮಾರ್ ಬಿ.ಎನ್. ಅವರು ಮಾತನಾಡಿ, ಜನವರಿ 24, 25, 26ರಂದು ಮೂರು ದಿನಗಳ ಕಾಲ ವಿಶ್ವ ಸಮ್ಮೇಳನ ನಡೆಯಲಿದ್ದು ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ, ಕರಾವಳಿ ಆಹಾರ ಮೇಳ, ಜಾನಪದ ವಸ್ತು ಪ್ರದರ್ಶನ, ಪುಸ್ತಕ ಮೇಳ ಜರುಗಲಿದೆ. ಜನವರಿ 24ರ ಸಂಜೆ ಗಂಟೆ 4ಕ್ಕೆ ಮುಕ್ಕ ಸತ್ಯಧರ್ಮ ದೇವಿ ದೇವಸ್ಥಾನದಿಂದ ಸಸಿಹಿತ್ಲು ಬ್ರಹ್ಮಶ್ರೀ ನಾರಾಯಣಗುರು ಮಂದಿರಕ್ಕೆ ಅದ್ಧೂರಿ ಜಾನಪದ ಮೆರವಣಿಗೆ ನಡೆಯಲಿದೆ. ಸಂಜೆ 5:30ಕ್ಕೆ ಸುವರ್ಣ ಸಂಭ್ರಮ ಧ್ವಜಾರೋಹಣ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷರು ಹಾಗೂ ವಿಶ್ವ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷರಾದ ಚಂದಯ್ಯ ಬಿ. ಕರ್ಕೇರ, ಅಗ್ಗಿದಕಳಿಯ ಬ್ರಹ್ಮ ಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರು ಹಾಗೂ ವಿಶ್ವ ಸಮ್ಮೇಳನ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಕುಮಾರ್ ಬಿ.ಎನ್., ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರು ಹಾಗೂ ಸಮ್ಮೇಳನ ಸಮಿತಿ ಕಾರ್ಯದರ್ಶಿ ರಮೇಶ್ ಪೂಜಾರಿ ಚೇಳಾಯರು, ಬ್ರಹ್ಮಶ್ರಿ ನಾರಾಯಣ ಗುರು ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಧಾನ ಸಂಚಾಲಕರಾದ ನರೇಶ್ ಕುಮಾರ್ ಸಸಿಹಿತ್ಲು, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯದರ್ಶಿ ಹಾಗೂ ವಿಶ್ವ ಸಮ್ಮೇಳನ ಸಮಿತಿಯ ಸಂಚಾಲಕರಾದ ಎಸ್.ಆರ್. ಪ್ರದೀಪ್, ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಕೋಶಾಧಿಕಾರಿ ವಸಂತ ಪೂಜಾರಿ, ಮಹಿಳಾ ಸಮಿತಿಯ ಅಧ್ಯಕ್ಷೆ ಸರೋಜಿನಿ ಶಾಂತರಾಜ್, ವಿಶ್ವ ಸಮ್ಮೇಳನ ಸಮಿತಿ ಪ್ರಧಾನ ಸಂಚಾಲಕರಾದ ಉದಯ ಬಿ. ಸುವರ್ಣ, ಕೋಶಾಧಿಕಾರಿ ಕಿರಣ್ ಕುಮಾರ್, ಸುವರ್ಣ ಮಹೋತ್ಸವ ಸಮಿತಿಯ ಕೋಶಾಧಿಕಾರಿ ಭಾಸ್ಕರ ಕೋಟ್ಯಾನ್, ಪ್ರಚಾರ ಸಮಿತಿಯ ಮುಕೇಶ್, ಮಾಧ್ಯಮ ಸಮಿತಿಯ ಯಶೋಧರ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X